ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣವನ್ನು ಉಲ್ಲೇಖಿಸಿದ ದೆಹಲಿ ಹೈಕೋರ್ಟ್, 'ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಿರಲು ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ' ಎಂದು ಹೇಳಿದೆ.
ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ನೇತೃತ್ವದ ನ್ಯಾಯಪೀಠವು, 'ಘಟನೆಯಿಂದ ವಕೀಲರ ಸಂಘದ ಸದಸ್ಯರಿಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ನೋವಾಗಿದೆ' ಎಂದು ಹೇಳಿತು.
ಶೂ ಎಸೆದ ಪ್ರಕರಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅವುಗಳನ್ನು ತೆಗೆದುಹಾಕಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜಿಕ ಹಿಸಾಸಕ್ತಿ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸಿತು.
ಅಕ್ಟೋಬರ್ 6ರಂದು ವಕೀಲ ರಾಕೇಶ್ ಕಿಶೋರ್, ಸಿಜೆಐ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದರು. ಘಟನೆ ಬೆನ್ನಲ್ಲೇ ಅವರ ಪರವಾನಗಿಯನ್ನು ಕೂಡಲೇ ಅಮಾನತು ಮಾಡಲಾಗಿದೆ.




