ನವದೆಹಲಿ: ಕಲ್ಲಿದ್ದಲು ಮಾಫಿಯಾ ವಿರುದ್ಧ ಹಣ ವರ್ಗಾವಣೆ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯವು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ 40ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ.
ದೊಡ್ಡ ಪ್ರಮಾಣದ ಕಲ್ಲಿದ್ದಲು ಮಾಫಿಯಾ ನಡೆದಿದ್ದು, ಇದರಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಬೆಳಿಗ್ಗೆ 6 ಗಂಟೆ ಸುಮಾರಿಗೆ ನಡೆದ ದಾಳಿಯಲ್ಲಿ ಫೆಡರಲ್ ತನಿಖಾ ಸಂಸ್ಥೆಯ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಜಾರ್ಖಾಂಡ್ ನಲ್ಲಿ ಇಡಿ 18 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ದುರ್ಗಾಪುರ, ಪುರುಲಿಯಾ, ಹೌರಾ ಮತ್ತು ಕೋಲ್ಕತ್ತಾದಾದ್ಯಂತ 24 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.
ಪ್ರಕರಣ ಸಂಬಂಧ ಅನಿಲ್ ಗೋಯಲ್, ಸಂಜಯ್ ಉದ್ಯೋಗ್, ಎಲ್‌ಬಿ ಸಿಂಗ್ ಮತ್ತು ಅಮರ್ ಮಂಡಲ್‌ಗೆ ಸಂಬಂಧಿಸಿದ ಪ್ರಕರಣಗಳೂ ಸೇರಿದ್ದು, ನರೇಂದ್ರ ಖಾರ್ಕಾ, ಅನಿಲ್ ಗೋಯಲ್, ಯುಧಿಷ್ಠೀರ್ ಘೋಷ್, ಕೃಷ್ಣ ಮುರಾರಿ ಕಾಯಲ್ ಮತ್ತು ಇತರರಿಗೆ ಸಂಬಂಧಿಸಿದ ಕಚೇರಿಗಳಲ್ಲೂ ಶೋಧ ಕಾರ್ಯಾಚರಣೆ ನಡೆಸಿದೆ.




