HEALTH TIPS

Cyclone Ditwah: ಪ್ರವಾಹ ಪೀಡಿತ ಶ್ರೀಲಂಕಾಕ್ಕೆ ಎನ್‌ಡಿಆರ್‌ಎಫ್‌ ತಂಡ

 ನವದೆಹಲಿ: 'ದಿತ್ವಾ' ಚಂಡಮಾರುತದಿಂದ ತತ್ತರಿಸಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಕೈಜೋಡಿಸಲು ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ(ಎನ್‌ಡಿಆರ್‌ಎಫ್‌) 80 ಮಂದಿಯ ತುಕಡಿಯನ್ನು ಭಾರತ ಕಳುಹಿಸಿದೆ ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.


'ಆಪರೇಷನ್‌ ಸಾಗರ ಬಂಧು' ಅಡಿಯಲ್ಲಿ ಈ ತುಕಡಿಯನ್ನು ರವಾನಿಸಲಾಗಿದೆ.

'ಎನ್‌ಡಿಆರ್‌ಎಫ್‌ ಸಿಬ್ಬಂದಿಯನ್ನು ಎರಡು ತಂಡಗಳಾಗಿ ವಿಂಗಡಿಸಲಾಗಿದೆ. ತಂಡದೊಂದಿಗೆ ನಾಲ್ಕು ಶ್ವಾನಗಳು ಇವೆ. ಪ್ರಥಮ ಚಿಕಿತ್ಸಾ ಕಿಟ್‌ ಸೇರಿದಂತೆ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗೆ ಅಗತ್ಯವಾದ ವಸ್ತುಗಳನ್ನು ಹೊತ್ತ ವಾಯಪಡೆಯ ವಿಮಾನವು ಇಂದು ಮುಂಜಾನೆ 4 ಗಂಟೆಯ ಸುಮಾರಿಗೆ ದೆಹಲಿಯ ಹಿಂಡನ್‌ ವಾಯುನೆಲೆಯಿಂದ ಕೊಲಂಬೊಗೆ ತೆರಳಿದೆ' ಎಂದು ಅವರು ತಿಳಿಸಿದ್ದಾರೆ.

ದಿತ್ವಾ ಚಂಡಮಾರುತದಿಂದ ಶ್ರೀಲಂಕಾದಲ್ಲಿ ಅಪಾರ ಹಾನಿಯುಂಟಾಗಿದ್ದು, ಪ್ರವಾಹ ಮತ್ತು ಭೂಕುಸಿತಕ್ಕೆ ಕಾರಣವಾಗಿದೆ. ಈ ಚಂಡಮಾರುತ ಭಾನುವಾರ ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries