HEALTH TIPS

ಶಬರಿಮಲೆ ಚಿನ್ನ ಕಳ್ಳತನ: IPS ಅಧಿಕಾರಿ ಭಾಗಿ ಎಂದಿದ್ದ ಯುಟ್ಯೂಬರ್ ವಿರುದ್ಧ FIR

ತಿರುವನಂತಪುರಂ: ಶಬರಿಮಲೆ ದೇವಾಲಯದಲ್ಲಿನ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್‌ ಅಧಿಕಾರಿ ವಿರುದ್ಧ ಸುಳ್ಳು ಆಪಾದನೆ ಮಾಡಿದ್ದ ಆರೋಪದಡಿ ಯುಟ್ಯೂಬರ್‌ ವಿರುದ್ಧ ಪ್ರಕರಣದ ದಾಖಲಾಗಿದೆ.

ಎಡಿಜಿಪಿ ಎಸ್‌. ಶ್ರೀಜಿತ್‌ ಅವರು ನೀಡಿರುವ ದೂರಿನ ಆಧಾರದಲ್ಲಿ ಶಬರಿಮಲೆ ಮ್ಯೂಸಿಯಂ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.

ಶಬರಿಮಲೆ ದೇವಾಲಯದ ಮುಖ್ಯ ಸಂಘಟಕ ಶ್ರೀಜಿತ್‌ ಹಾಗೂ ಪೊಲೀಸರು, ಚಿನ್ನ ಕಳ್ಳತನದಲ್ಲಿ ಭಾಗಿಯಾಗಿದ್ದಾರೆ ಎಂಬುದಾಗಿ ಕೆ.ಎಂ.ಷಾಜಹಾನ್‌ ಅವರು ತಮ್ಮ ಯುಟ್ಯೂಬ್‌ ಚಾನೆಲ್‌ನಲ್ಲಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಧಾರ್ಮಿಕ ವಿಚಾರವನ್ನು ಮುಂದಿಟ್ಟು, ಸಮುದಾಯಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆಗಳನ್ನೊಳಗೊಂಡ ವಿಡಿಯೊಗಳನ್ನು ಪ್ರಸಾರ ಮಾಡಿದ ಆರೋಪವೂ ಷಾಜಹಾನ್‌ ಮೇಲಿದೆ.

‌ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣದ ದಾಖಲಾಗಿದೆ.

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ನಾಪತ್ತೆಯಾಗಿದೆ ಎನ್ನಲಾದ ಪ್ರಕರಣವು ರಾಜ್ಯ ರಾಜಕೀಯದಲ್ಲಿ ವಿವಾದ ಎಬ್ಬಿಸಿದೆ.

ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ತಿರುವಾಂಕೂರು ದೇವಸ್ವ ಮಂಡಳಿಯ ಇಬ್ಬರು ಮಾಜಿ ಅಧ್ಯಕ್ಷರು ಸೇರಿದಂತೆ ಹಲವರನ್ನು ಬಂಧಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries