HEALTH TIPS

National Herald case: ಸೋನಿಯಾ, ರಾಹುಲ್ ವಿರುದ್ಧ ಹೊಸ ಎಫ್‌ಐಆರ್

 ನವದೆಹಲಿ: ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಇತರ ಆರೋಪಿಗಳ ವಿರುದ್ಧ ದೆಹಲಿ ಪೊಲೀಸರು ಹೊಸದಾಗಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.


ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ್ದ ದೂರಿನನ್ವಯ ದೆಹಲಿ ಪೊಲೀಸ್‌ ಆರ್ಥಿಕ ಅಪರಾಧಗಳ ವಿಭಾಗವು (ಇಒಡಬ್ಲ್ಯು) ಸೋನಿಯಾ, ರಾಹುಲ್‌ ಹಾಗೂ ಇತರ ಏಳು ಮಂದಿ ವಿರುದ್ಧ ಅಕ್ಟೋಬರ್‌ 3ರಂದು ಎಫ್‌ಐಆರ್ ದಾಖಲಿಸಿಕೊಂಡಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಕ್ರಿಮಿನಲ್‌ ಪಿತೂರಿ, ವಿಶ್ವಾಸದ್ರೋಹ ಆರೋಪಕ್ಕೆ ಸಂಬಂಧಿಸಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸದಾಗಿ ಎಫ್‌ಐಆರ್‌ ದಾಖಲಿಸಿರುವುದನ್ನು ಕಾಂಗ್ರೆಸ್‌ ಟೀಕಿಸಿದೆ. ಪಕ್ಷದ ನಾಯಕ ಜೈರಾಮ್ ರಮೇಶ್‌ ಅವರು, 'ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಜೋಡಿಯು, ಕಾಂಗ್ರಸ್‌ನ ಉನ್ನತ ನಾಯಕರಿಗೆ ಕಿರುಕುಳ ನೀಡುವುದು, ಬೆದರಿಕೆಯೊಡ್ಡುವುದು ಮತ್ತು ಸೇಡಿನ ರಾಜಕೀಯವನ್ನು ಮುಂದುವರಿಸಿದೆ. ಬೆದರಿಕೆ ಒಡ್ಡುವವರು ಸ್ವತಃ ಅಭದ್ರತೆ ಹೊಂದಿರುತ್ತಾರೆ ಮತ್ತು ಭಯದಲ್ಲಿರುತ್ತಾರೆ' ಎಂದು ಟ್ವೀಟ್ ಮಾಡಿದ್ದಾರೆ.

'ನ್ಯಾಷನ್‌ ಹೆರಾಲ್ಡ್‌ ಪ್ರಕರಣ ಸಂಪೂರ್ಣ ನಕಲಿ. ಅಂತಿಮವಾಗಿ ನ್ಯಾಯ ಜಯ ಸಾಧಿಸುತ್ತದೆ. ಸತ್ಯಮೇವ ಜಯತೆ' ಎಂದು ಹೇಳಿದ್ದಾರೆ.‌

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರೋಪಪಟ್ಟಿ ಸಲ್ಲಿಸಿರುವ ಇ.ಡಿ., ಕಾಂಗ್ರೆಸ್‌ ನಾಯಕರಾದ ಸೋನಿಯಾ, ರಾಹುಲ್‌, ಮೋತಿಲಾಲ್‌ ವೋರಾ, ಆಸ್ಕರ್‌ ಫರ್ನಾಂಡಿಸ್‌ (ಮೃತರು) ಹಾಗೂ ಸುಮನ್‌ ದುಬೆ, ಸ್ಯಾಮ್‌ ಪಿತ್ರೋಡಾ ಮತ್ತು 'ಯಂಗ್‌ ಇಂಡಿಯನ್‌' ಕಂಪನಿಯನ್ನು ಆರೋಪಿಗಳು ಎಂದು ಉಲ್ಲೇಖಿಸಿದೆ.

ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯನ್ನು ಪ್ರಕಟಿಸುತ್ತಿದ್ದ ಅಸೋಸಿಯೇಟೆಡ್‌ ಜರ್ನಲ್ಸ್‌ಗೆ (ಎಜೆಎಲ್‌) ಸೇರಿದ ಸುಮಾರು ₹2,000 ಕೋಟಿ ಮೌಲ್ಯದ ಆಸ್ತಿಯನ್ನು ಆರೋಪಿಗಳೆಲ್ಲರೂ ತಮ್ಮ ವಶಕ್ಕೆ ಪಡೆದಿದ್ದರು. ಯಂಗ್ ಇಂಡಿಯನ್‌ ಸಂಸ್ಥೆಯಲ್ಲಿ ಸೋನಿಯಾ ಹಾಗೂ ರಾಹುಲ್‌ ಗಾಂಧಿ ಶೇಕಡ 76ರಷ್ಟು ಷೇರು ಹೊಂದಿದ್ದಾರೆ. ₹ 90 ಕೋಟಿ ಸಾಲಕ್ಕೆ ಬದಲಾಗಿ ಎಜೆಎಲ್‌ನ ಆಸ್ತಿಗಳನ್ನು ಇವರು ಕಬಳಿಸಿದ್ದಾರೆ ಎಂದು ತಿಳಿಸಿದೆ. 









ಆರೋಪಪಟ್ಟಿಯನ್ನು ವಿಚಾರಣೆಗೆ ಅಂಗೀಕರಿಸುವ ಕುರಿತು ಡಿಸೆಂಬರ್‌ 16ರಂದು ಆದೇಶ ಪ್ರಕಟಿಸಲಾಗುವುದು ಎಂದು ದೆಹಲಿ ನ್ಯಾಯಾಲಯ ಹೇಳಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries