ನವದೆಹಲಿ: ಬಳಕೆದಾರರ ಮೊಬೈಲ್‌ನಲ್ಲಿ ಸಕ್ರಿಯವಾಗಿರುವ ಸಿಮ್ ಕಾರ್ಡ್ ಇದ್ದಾಗ ಮಾತ್ರ ವಾಟ್ಸ್‌ಆಯಪ್ ಸೇರಿದಂತೆ ಆಯಪ್ ಆಧಾರಿತ ಸಂವಹನ ಸೇವೆ ಕಾರ್ಯನಿರ್ವಹಿಸುವುದನ್ನು ಖಾತರಿಪಡಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.
ಈ ಕುರಿತಂತೆ 120 ದಿನಗಳೊಳಗಾಗಿ ದೂರಸಂಪರ್ಕ ಇಲಾಖೆಗೆ ಅನುಪಾಲನಾ ವರದಿಯನ್ನು ಸಲ್ಲಿಸುವಂತೆ ಆಯಪ್ ಆಧಾರಿತ ಸಂವಹನ ಸೇವೆ ಒದಗಿಸುವ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ.
ವರದಿ ಸಲ್ಲಿಸಲು ವಿಫಲವಾದಲ್ಲಿ ದೂರಸಂಪರ್ಕ ಕಾಯ್ದೆ 2023, ಟೆಲಿಕಾಂ ಸೈಬರ್ ಭದ್ರತಾ ನಿಯಮ ಮತ್ತು ಇತರ ಕಾಯ್ದೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.
ಕೇಂದ್ರ ಸರ್ಕಾರದ ಈ ಕ್ರಮವು ವಾಟ್ಸ್‌ಆಯಪ್, ಸಿಗ್ನಲ್, ಟೆಲಿಗ್ರಾಮ್, ಅರಟ್ಟೈ, ಸ್ನಾಪ್‌ಚಾಟ್, ಶೇರ್‌ಚಾಟ್, ಜಿಯೋಚಾಟ್, ಜೋಷ್‌ನಂತಹ ಸಂವಹನ ಸೇವೆ ನೀಡುವ ಆಯಪ್‌ಗಳ ಬಳಕೆದಾರರ ಮೇಲೆ ಪರಿಣಾಮ ಬೀರಲಿದೆ.




