HEALTH TIPS

SIR: ರಾಜಕೀಯ, ಸಂಘಟನಾತ್ಮಕ ಮತ್ತು ಕಾನೂನಾತ್ಮಕವಾಗಿ ಹೋರಾಡಲು ರಾಹುಲ್ ಸಲಹೆ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿಷಯದಲ್ಲಿ ಕಾಂಗ್ರೆಸ್ ರಾಜಕೀಯವಾಗಿ, ಸಂಘಟನಾತ್ಮಕವಾಗಿ ಮತ್ತು ಕಾನೂನಾತ್ಮಕವಾಗಿ ಹೋರಾಟ ನಡೆಸಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿರುವುದಾಗಿ ಮೂಲಗಳು ತಿಳಿಸಿವೆ. 

ಎಸ್‌ಐಆರ್ ನಡೆಯುತ್ತಿರುವ 12 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಪಕ್ಷದ ಪದಾಧಿಕಾರಿಗಳೊಂದಿನ ಎಐಸಿಸಿ ಸಭೆಯಲ್ಲಿ ರಾಹುಲ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

'ಸ್ವಚ್ಛ ಮತದಾರರ ಪಟ್ಟಿಯನ್ನು ಒದಗಿಸುವುದು ಚುನಾವಣಾ ಆಯೋಗದ ಕರ್ತವ್ಯವಾಗಿದೆ' ಎಂದು ರಾಹುಲ್ ಪ್ರತಿಪಾದಿಸಿದ್ದಾರೆ.

'ಎಸ್‌ಐಆರ್ ಅನ್ನು ತರಾತುರಿಯಲ್ಲಿ ಅನುಷ್ಠಾನಗೊಳಿಸಲು ಯತ್ನ ನಡೆಯುತ್ತಿದೆ. ಆ ಮೂಲಕ ನೈಜ ಮತದಾರರನ್ನು ಅಳಿಸುವ ಉದ್ದೇಶವನ್ನು ಹೊಂದಿದೆ' ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

ಮತಕಳ್ಳತನ ಬಗ್ಗೆ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, 'ಎಸ್‌ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ವರ್ತನೆಯು ತೀವ್ರ ನಿರಾಶಾದಾಯಕವಾಗಿದೆ ಎಂದಿದೆ. ಅಲ್ಲದೆ ಚುನಾವಣಾ ಆಯೋಗವು ಬಿಜೆಪಿಯ ನೆರಳಿನಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದನ್ನು ಸಾಬೀತುಪಡಿಸಬೇಕಿದೆ' ಎಂದು ಒತ್ತಾಯಿಸಿದೆ.

243 ಸದಸ್ಯ ಬಲದ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ 202 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೇರಿತ್ತು. ಮತ್ತೊಂದೆಡೆ ತೀವ್ರ ಹಿನ್ನಡೆ ಅನುಭವಿಸಿದ್ದ ಮಹಾಘಟಬಂಧನ ಮೈತ್ರಿಯು 35 ಸೀಟುಗಳನ್ನಷ್ಟೇ ಗೆದ್ದಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries