HEALTH TIPS

ವಂದೇ ಮಾತರಂಗೆ 100 ವರ್ಷವಾದಾಗ ದೇಶ ತುರ್ತು ಪರಿಸ್ಥಿತಿಯಲ್ಲಿತ್ತು: ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂಗೆ ನೂರು ವರ್ಷವಾದಾಗ, ಸಂವಿಧಾನವನ್ನು ಉಸಿರುಗಟ್ಟಿಸಲಾಗಿತ್ತು. ದೇಶವನ್ನು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಲಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಸೋಮವಾರ ಹೇಳಿದ್ದಾರೆ.

ವಂದೇ ಮಾತರಂಗೆ 150 ವರ್ಷವಾದ ಪ್ರಯುಕ್ತ ಲೋಕಸಭೆಯಲ್ಲಿ ಅದರ ಕುರಿತ ಚರ್ಚೆಯನ್ನು ಪ್ರಧಾನಿ ಮೋದಿ ಪ್ರಾರಂಭಿಸಿದರು.

ರಾಷ್ಟ್ರಗೀತೆ ವಂದೇ ಮಾತರಂಗೆ 50 ವರ್ಷ ತುಂಬಿದಾಗ ದೇಶವು ವಸಾಹತುಶಾಹಿಯ ಅಡಿಯಲ್ಲಿ ತತ್ತರಿಸುತಿತ್ತು. 100 ವರ್ಷವಾದಾಗ ತುರ್ತು ಪರಿಸ್ಥಿತಿಯಲ್ಲಿತ್ತು. ಆಗ, ದೇಶಭಕ್ತಿ ಹೊಂದಿದ್ದ, ರಾಷ್ಟ್ರಕ್ಕಾಗಿ ಪ್ರಾಣ ಸಮರ್ಪಿಸಲು ಸಿದ್ದರಿದ್ದವರು ಜೈಲಿನಲ್ಲಿ ಬಂಧಿಯಾಗಿದ್ದರು. ಅದು ನಮ್ಮ ಇತಿಹಾಸದ ಕರಾಳ ಅಧ್ಯಾಯ ಎಂದು ಹೇಳಿದ್ದಾರೆ.

ವಂದೇ ಮಾತರಂ ಗೀತೆಗೆ 150 ವರ್ಷ ತುಂಬಿದ ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿರುವುದು ನಮ್ಮ ಹೆಮ್ಮೆ. ನಾವು ವಂದೇ ಮಾತರಂನ ಹೆಮ್ಮೆಯನ್ನು ಮರು ಸೃಷ್ಠಿಸಬೇಕು ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ಚಳವಳಿಯ ವೇಳೆ ವಂದೇ ಮಾತರಂ ಗೀತೆಯು ಇಡೀ ದೇಶಕ್ಕೆ ಶಕ್ತಿ ಮತ್ತು ಸ್ಫೂರ್ತಿ ನೀಡಿತ್ತು ಎಂದು ತಿಳಿಸಿದ್ದಾರೆ.

ಡಿ.1ರಿಂದ ಲೋಕಸಭೆಯಲ್ಲಿ ಚಳಿಗಾಲದ ಅಧಿವೇಶನವು ಆರಂಭವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries