HEALTH TIPS

ವಿಮೆ: ಶೇ100 ಎಫ್‌ಡಿಐಗೆ ಅಸ್ತು

ನವದೆಹಲಿ: ವಿಮಾ ಕ್ಷೇತ್ರದಲ್ಲಿ ಶೇ 100ರಷ್ಟು ವಿದೇಶಿ ನೇರ ಹೂಡಿಕೆಗೆ (ಎಫ್‌ಡಿಐ) ಅವಕಾಶ ಕಲ್ಪಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು.

'ಸಬ್‌ಕಾ ವಿಮಾ ಸಬ್‌ಕಿ ರಕ್ಷಾ(ವಿಮಾ ಕಾಯ್ದೆಗಳ ತಿದ್ದುಪಡಿ) ಮಸೂದೆ,2025' ಮಂಡಿಸಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,'ಎಫ್‌ಡಿಐ ಹರಿವು ಹೆಚ್ಚಳಕ್ಕೆ ಅವಕಾಶ ಕಲ್ಪಿಸಿದಾಗ, ಹೆಚ್ಚು ವಿಮಾ ಕಂಪನಿಗಳು ಈ ಕ್ಷೇತ್ರ ಪ್ರವೇಶಿಸಲು ಸಾಧ್ಯವಾಗಲಿದೆ ಹಾಗೂ ಕೈಗೆಟುಕುವ ದರದಲ್ಲಿ ಎಲ್ಲರಿಗೂ ವಿಮಾ ಸೌಲಭ್ಯ ಸಿಗಲಿದೆ' ಎಂದು ಹೇಳಿದರು.

'ಈ ಕ್ಷೇತ್ರದಲ್ಲಿ ಏಕಸ್ವಾಮ್ಯ ಇದ್ದರೆ ನಮಗೆ ಹೆಚ್ಚು ಅನುಕೂಲ ಆಗುವುದಿಲ್ಲ. ಸ್ಪರ್ಧೆ ಹೆಚ್ಚಿದಷ್ಟೂ ಉತ್ತಮ ದರಕ್ಕೆ ವಿಮೆ ಸಿಗಲಿದೆ' ಎಂದೂ ಅವರು ಹೇಳಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries