ನವದೆಹಲಿ: ನರೇಗಾಕ್ಕೆ ಮರುನಾಮಕರಣ ಮಾಡಿ ಹೊಸ ಕಾಯ್ದೆ ರೂಪಿಸಿರುವುದನ್ನು ಖಂಡಿಸಿ ಜನವರಿ 16ರಂದು 'ಅಖಿಲ ಭಾರತ ಪ್ರತಿರೊಧ ದಿನ' ಹೆಸರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಸೋಮವಾರ ಘೋಷಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಕೆಎಂ ನಾಯಕರು, 'ವಿಬಿ-ಜಿ ರಾಮ್ ಜಿ' ಕಾಯ್ದೆಯನ್ನು ರದ್ದುಗೊಳಿಸಬೇಕು' ಎಂದು ಆಗ್ರಹಿಸಿದ್ದಾರೆ.
ಮುಂದಿನ ನಡೆಯ ಬಗ್ಗೆ ನಿರ್ಧರಿಸಲು ಜನವರಿ 11ರಂದು ದೆಹಲಿಯಲ್ಲಿ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.

