ಕರಾಚಿ: ಪಾಕಿಸ್ತಾನದ ಅತಿದೊಡ್ಡ ನಗರ ಕರಾಚಿ ಮತ್ತು ಬಲೂಚಿಸ್ತಾನ ಭಾಗದ ಕೆಲವು ಪ್ರದೇಶಗಳಲ್ಲಿ ಸೋಮವಾರ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪದ ಕೇಂದ್ರವು ಬಲೂಚಿಸ್ತಾನದ ಸೋನ್ಮಿಯಾನಿ ಎಂದು ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಕೇಂದ್ರ ತಿಳಿಸಿದೆ.
ಯಾವುದೇ ಸಾವುನೋವು ಸಂಭವಿಸಿಲ್ಲ. ಯಾರಿಗೂ ಗಾಯಗಳೂ ಆಗಿಲ್ಲ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

