HEALTH TIPS

ಇಸ್ರೋ | ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ: ಪ್ರಧಾನಿ ಮೋದಿ

ನವದೆಹಲಿ: ಭಾರತದ ನೆಲದಿಂದ ಅಮೆರಿಕದ ಸಂವಹನ ಉಪಗ್ರಹ 'ಬ್ಲೂಬರ್ಡ್‌ ಬ್ಲಾಕ್‌-2' ಅನ್ನು ಇಸ್ರೊ ನಿಗದಿತ ಕಕ್ಷೆಗೆ ತಲುಪಿಸಿರುವುದು ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಬಣ್ಣಿಸಿದ್ದಾರೆ. 

ಆಂಧ್ರ ಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದ ಎರಡನೇ ಲಾಂಚ್‌ ಪ್ಯಾಡ್‌ನಿಂದ 'ಬ್ಲೂಬರ್ಡ್‌ ಬ್ಲಾಕ್‌-2' ಸಂವಹನ ಉಪಗ್ರಹವನ್ನು ಇಸ್ರೊದ ಅತ್ಯಂತ ಭಾರವಾದ ಎಲ್‌ವಿಎಂ3-ಎಂ6 ರಾಕೆಟ್ ಮೂಲಕ ಉಡ್ಡಯನ ಮಾಡಲಾಗಿದೆ.

'ಇದು ಭಾರತದ ಬಾಹ್ಯಾಕಾಶ ಪಯಣದಲ್ಲಿ ಹೆಮ್ಮೆಯ ಮೈಲಿಗಲ್ಲು' ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

'ಇದರೊಂದಿಗೆ ದೇಶದ ಅತಿ ಭಾರದ ಉಡ್ಡಯನ ಸಾಮರ್ಥ್ಯವನ್ನು ಮತ್ತಷ್ಟು ಬಲಗೊಳಿಸಿದೆ. ಜಾಗತಿಕ ವಾಣಿಜ್ಯ ಉಡ್ಡಯನ ಮಾರುಕಟ್ಟೆಯಲ್ಲಿ ನಮ್ಮ ಸಾನಿಧ್ಯವನ್ನು ಬಲಿಷ್ಠಗೊಳಿಸುತ್ತಿದೆ' ಎಂದು ಹೇಳಿದ್ದಾರೆ.

'ಆತ್ಮನಿರ್ಭರ ಭಾರತ' ಉಪಕ್ರಮದತ್ತ ನಮ್ಮ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ. ಇದರ ಹಿಂದೆ ಶ್ರಮ ವಹಿಸಿರುವ ನಮ್ಮ ಬಾಹ್ಯಾಕಾಶ ವಿಜ್ಞಾನಿಗಳು ಹಾಗೂ ಎಂಜಿನಿಯರ್‌ಗಳಿಗೆ ಅಭಿನಂದನೆಗಳು. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತಷ್ಟು ಎತ್ತರಕ್ಕೆ ಬೆಳೆಯುತ್ತಲೇ ಇದೆ' ಎಂದು ಉಲ್ಲೇಖಿಸಿದ್ದಾರೆ.

'ಯುವಜನರ ಪ್ರಯತ್ನದಿಂದ ಭಾರತದ ಬಾಹ್ಯಾಕಾಶ ಕಾರ್ಯಕ್ರಮವು ಹೆಚ್ಚು ಪರಿಣಾಮಕಾರಿಯೆನಿಸಿದೆ. ಅತಿ ಭಾರದ ಎಲ್‌ವಿಎಂ3 ಯೋಜನೆಯೊಂದಿಗೆ ಗಗನಯಾನದಂತಹ ಭವಿಷ್ಯದ ಕಾರ್ಯಕ್ರಮಗಳಿಗೆ ಹೆಚ್ಚಿನ ಉತ್ತೇಜನ ಸಿಗುತ್ತದೆ' ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries