ನವದೆಹಲಿ: ಕೇಂದ್ರ ಸರ್ಕಾರವು ಮೊಬೈಲ್‌ಗಳಲ್ಲಿ 'ಸಂಚಾರ ಸಾಥಿ' ಆಯಪ್ ಅಳವಡಿಕೆ ಕಡ್ಡಾಯಗೊಳಿಸುವ ಆದೇಶವನ್ನು ನಿನ್ನೆ (ಬುಧವಾರ) ಹಿಂಪಡೆದುಕೊಂಡಿದೆ.
ಮೊಬೈಲ್‌ಗಳಲ್ಲಿ 'ಸಂಚಾರ ಸಾಥಿ' ಆಯಪ್ ಪ್ರಿ-ಇನ್‌ಸ್ಟಾಲ್ ಮಾಡುವುದಕ್ಕೆ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳಿಂದ ವ್ಯಾಪಕ ಟೀಕೆಗಳು ವ್ಯಕ್ತವಾಗಿತ್ತು.
ಒಂದೇ ದಿನದಲ್ಲಿ ಸ್ವಯಂ ಪ್ರೇರಿತವಾಗಿ ಸಂಚಾರ ಸಾಥಿ ಆಯಪ್ ಡೌನ್‌ಲೋಡ್ ಮಾಡಿಕೊಂಡವರ ಪ್ರಮಾಣ 10 ಪಟ್ಟು ಏರಿಕೆಯಾಗಿತ್ತು.
ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಬಳಕೆದಾರರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಉದ್ದೇಶವಾಗಿತ್ತು. ಕಳೆದೊಂದು ದಿನದಲ್ಲಿ 6 ಲಕ್ಷ ಮಂದಿ ಆಯಪ್ ಡೌನ್‌ಲೋಡ್ ಮಾಡಿದ್ದು, 10 ಪಟ್ಟು ಹೆಚ್ಚಳ ಕಂಡುಬಂದಿದೆ. ಆಯಪ್‌ಗೆ ಹೆಚ್ಚುತ್ತಿರುವ ಬೆಂಬಲದ ಹಿನ್ನೆಲೆಯಲ್ಲಿ ಪ್ರಿ-ಇನ್‌ಸ್ಟಾಲ್ ಕಡ್ಡಾಯಗೊಳಿಸದಿರಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.




