ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ಗೋವಿಂದರಾಜು ಎಂ. ಕಲ್ಲೂರು ಅವರ 'ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು' ಕಥಾ ಸಂಕಲನಕ್ಕೆ ಬೆಳಗಾವಿಯ ಬಸವರಾಜ ಕಟ್ಟೀಮನಿ ಪ್ರತಿಷ್ಠಾನವು ನೀಡುವ 2023ನೇ ಸಾಲಿನ 'ಬಸವರಾಜ ಕಟ್ಟೀಮನಿ ಯುವ ಸಾಹಿತ್ಯ ಪುಸ್ತಕ ಪ್ರಶಸ್ತಿ' ಲಭಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ 2026ರ ಜನವರಿ 18ರ ಭಾನುವಾರ, ಧಾರವಾಡದ ವಿದ್ಯಾವರ್ಧಕ ಸಂಘದ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಸವರಾಜ ಕಟ್ಟೀಮನಿ ಪ್ರತಿಷ್ಠಾನವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

-GOVINDA%20RAG.jpeg)
