ಮಂಜೇಶ್ವರ: ತಲಪ್ಪಾಡಿಯಲ್ಲಿ ಅಪಘಾತಕ್ಕೀಡಾದ ಕಾರಿನಿಂದ ಭಾರೀ ಪ್ರಮಾಣದ ಎಂಡಿಎಂಎ ಪತ್ತೆಹಚ್ಚಲಾಗಿದ್ದು, ಪರಾರಿಯಾಗಿರುವ ಆರೋಪಿಯನ್ನು ಉಪ್ಪಳ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡಿದರುವ ಆದಂ ಎಂಬಾತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾರಿಗೆ ಇಲಾಖೆ ಚೆಕ್‍ಪೋಸ್ಟ್ ಬಳಿ ನಿಲ್ಲಿಸಿದ್ದ ಟ್ಯಾಂಕರ್ ಲಾರಿಗೆ ಮಂಗಳೂರು ಭಾಗದಿಂದ ಅಗಮಿಸಿದ ಕಾರು ಡಿಕ್ಕಿಯಾಘಿ ಅಪಘಾತ ಸಂಭವಿಸಿದೆ. ಅಪಘಾತ ನಡೆದ ತಕ್ಷಣ ಚಾಲಕ ಸಇದ್ದೀಕ್ ಪರಾರಿಯಾಗಿದ್ದು, ಗಾಯಾಳು ಆದಂನನ್ನು ಉಳ್ಳಾಲ ಠಾಣೆ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರು ತಪಸಣೆ ನಡೆಸಿದಾಗ 3.90ಲಕ್ಷ ರೂ. ಮೌಲ್ಯದ 78ಗ್ರಾಂ ಮಾರಕ ಎಂಡಿಎಂಎ ಪತ್ತೆಯಾಗಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಆದಂನನ್ನು ಉಳ್ಳಾಲ ಠಾಣೆ ಪೊಲೀಸರು ವಿಚಾರಣೆಗೊಳಪಡಿಸಿದಾಗ ಪರಾರಿಯಾಗಿರುವ ಸಿದ್ದೀಕ್ ಬಗ್ಗೆ ಮಾಹಿತಿ ಲಭಿಸಿತ್ತು.

