ಕಾಸರಗೋಡು: ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಕಾಸರಗೋಡು ನಗರ ಠಾಣೆಯಿಂದ ಪರಾರಿಯಾಗಲು ಯತ್ನಿಸಿದ್ದು, ಈತನನ್ನು ತಾಸುಗಳೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನೆಕ್ರಾಜೆ ಕೊರೆಕ್ಕಾನ ನಿವಾಸಿ ಅಶ್ವತ್ ಎಂಬಾತ ಪರಾರಿಯಾಗಲು ಯತ್ನಿಸಿದ ಆರೋಪಿ.
ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪೋಕ್ಸೋ ಪ್ರಕರಣವೊಂದಕ್ಕೆ ಸಂಬಂಧಿಸಿ ಅಶ್ವತ್‍ನನ್ನು ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿದ್ದು, ಈ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಈತನನ್ನು ವಶಕ್ಕೆ ತೆಗೆದುಕೊಂಡು ಠಾಣೆಯಲ್ಲಿ ವಿಚಾರಣೆಗೊಳಪಡಿಸುತ್ತಿದ್ದಂತೆ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣ ಪೊಲೀಸರು ಹುಡುಕಾಟ ಆರಂಭಿಸಿದ್ದು, ತಾಸುಗಳ ನಂತರ ನಗರದ ಆನೆಬಾಗಿಲಿನ ಕುರುಚಲು ಪೊದೆಯಡೆಯಲ್ಲಿ ಅವಿತುಕುಳಿತಿದ್ದ ಈತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.




