ಪೇಶಾವರ: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪೊಲೀಸರ ವಾಹನದ ಮೇಲೆ ಅಪರಿಚಿತ ಶಸ್ತ್ರಸಜ್ಜಿತ ದಾಳಿಕೋರರು ಗುಂಡಿನ ದಾಳಿ ನಡೆಸಿದ್ದು, ಐವರು ಪೊಲೀಸರು ಮೃತಪಟ್ಟಿದ್ದಾರೆ.
'ಕರಾಕ್ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆ ದಾಳಿ ನಡೆದಿದೆ.
ವ್ಯಾನ್‌ನಲ್ಲಿದ್ದ ಐದು ಮಂದಿ ಪೊಲೀಸರು ಮೃತಪಟ್ಟಿದ್ದಾರೆ' ಎಂದು ಜಿಲ್ಲಾ ಪೊಲೀಸ್ ಅಧಿಕಾರಿ(ಡಿಪಿಒ) ಸೌದ್ ಖಾನ್ ತಿಳಿಸಿದ್ದಾರೆ.
ನಿಷೇಧಿತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಸಂಘಟನೆಯೇ ದಾಳಿಯ ಹಿಂದಿದೆ ಎಂದು ಸರ್ಕಾರ ಇದೇ ವೇಳೆ ಆರೋಪಿಸಿದೆ.

