ಕಾಸರಗೋಡು: ಕಾಸರಗೋಡು ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸಾಬು ಅಬ್ರಹಾಂ ಆಯ್ಕೆಯಾಗಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಸಾಬು ಅಬ್ರಹಾಂ ಒಂಬತ್ತು ಮತಗಳ ವಿರುದ್ಧ ಏಳು ಮತಗಳ ಅಂತರದಿಂದ ಆಯ್ಕೆಯಾದರು. ಎದುರಾಳಿ ಅಭ್ಯರ್ಥಿ ಜೆ.ಎಸ್. ಸೋಮಶೇಖರ. ಸಾಬು ಅಬ್ರಹಾಂ ಕುತ್ತಿಕೋಲ್ ವಿಭಾಗದ ಪ್ರತಿನಿಧಿ. ಒಬ್ಬ ಸದಸ್ಯರು ಮತದಾನದಿಂದ ದೂರ ಉಳಿದರು. ಒಬ್ಬ ಸದಸ್ಯರು ಸಮಯಕ್ಕೆ ಗೈರು ಹಾಜರಾದ ಕಾರಣ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗಲಿಲ್ಲ. ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಕೆ. ಇನ್ಭಾಶೇಕರ್ ಚುನಾವಣಾ ಪ್ರಕ್ರಿಯೆಗಳ ಮೇಲ್ವಿಚಾರಣೆ ನಡೆಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾದ ಸಾಬು ಅಬ್ರಹಾಂ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿ ಪ್ರಮಾಣ ವಚನ ಬೋಧಿಸಿದರು. ಸಹಾಯಕ ಚುನಾವಣಾಧಿಕಾರಿ ಎಡಿಎಂ ಪಿ. ಅಖಿಲ್ ಮತ್ತು ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಎಸ್. ಬಿಜು ಚುನಾವಣಾ ಪ್ರಕ್ರಿಯೆಗಳಲ್ಲಿ ಭಾಗವಹಿಸಿದ್ದರು.
ಕೆ.ಕೆ. ಸೋಯಾ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ:
ಕಾಸರಗೋಡು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಕೆ.ಕೆ. ಸೋಯಾ ಆಯ್ಕೆಯಾದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಒಂಬತ್ತು ಮತಗಳ ವಿರುದ್ಧ ಎಂಟು ಮತಗಳನ್ನು ಗಳಿಸಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಸೋಯಾ ಆಯ್ಕೆಯಾದರು. ಎದುರಾಳಿ ಅಭ್ಯರ್ಥಿ ಜಸ್ನಾ ಮನಾಫ್. ಕೆ.ಕೆ. ಸೋಯಾ ಪೆರಿಯಾ ವಿಭಾಗದ ಪ್ರತಿನಿಧಿ. ಒಬ್ಬ ಸದಸ್ಯರು ಮತದಾನದಿಂದ ದೂರ ಉಳಿದಿದ್ದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಕೆ.ಕೆ. ಸೋಯಾ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡರು. ಅಧ್ಯಕ್ಷ ಸಾಬು ಅಬ್ರಹಾಂ ಪ್ರಮಾಣ ವಚನ ಬೋಧಿಸಿದರು. ಚುನಾವಣಾಧಿಕಾರಿಯಾಗಿದ್ದ ಜಿಲ್ಲಾಧಿಕಾರಿ ಕೆ. ಇನ್ಭಾಶೇಖರ್ ಚುನಾವಣಾ ಪ್ರಕ್ರಿಯೆಗಳ ಮೇಲ್ವಿಚಾರಣೆ ನಡೆಸಿದರು. ಚುನಾವಣಾಧಿಕಾರಿ ಎ.ಡಿ.ಎಂ. ಪಿ. ಅಖಿಲ್ ಮತ್ತು ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಎಸ್. ಬಿಜು ಚುನಾವಣಾ ಪ್ರಕ್ರಿಯೆಗಳಲ್ಲಿ ಭಾಗವಹಿಸಿದ್ದರು.



