ಕಾಸರಗೋಡು: ಕೇರಳ ರಾಜ್ಯ ಚುನಾವಣಾ ಆಯೋಗದ ಸೂಚನೆಯಂತೆ, ಸ್ಥಳೀಯಾಡಳಿತ ಚುನಾವಣೆಗಳಿಗೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲೆಯ ವಿವಿಧ ಪೋಲೀಸ್ ಠಾಣೆಗಳಲ್ಲಿ ಠೇವಣಿ ಇಡಲಾದ ಶಸ್ತ್ರಾಸ್ತ್ರಗಳನ್ನು ಮಾದರಿ ನೀತಿ ಸಂಹಿತೆಯನ್ನು ಹಿಂತೆಗೆದುಕೊಂಡಿರುವುದರಿಂದ ಪರವಾನಗಿ ಹೊಂದಿರುವವರಿಗೆ ಹಿಂತಿರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

