ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ (80) ಅವರು ಮಂಗಳವಾರ ನಿಧನರಾಗಿದ್ದಾರೆ.
1991ರಲ್ಲಿ ಖಲೀದಾ ಜಿಯಾ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿಯಾಗಿ ಆಯ್ಕೆಯಾಗಿದ್ದರು.
ಬಾಂಗ್ಲಾದೇಶ ನ್ಯಾಷನಲ್ ಪಕ್ಷದ ಅಧ್ಯಕ್ಷೆಯಾಗಿದ್ದ ಖಲೀದಾ ಅವರು ಮುಂಬರುವ ಚುನಾವಣೆಯಲ್ಲಿ ಜಯ ಸಾಧಿಸಿ ಪ್ರಧಾನಿಯಾಗುವ ಕನಸು ಕಂಡಿದ್ದರು.
ಖಲೀದಾ ಅವರ ನಿಧನದ ಬಗ್ಗೆ ಮಾಹಿತಿ ನೀಡಿರುವ ಪಕ್ಷ, 'ಮಂಗಳವಾರ ಬೆಳಿಗ್ಗೆ 6 ಗಂಟೆಗೆ ರಾಷ್ಟ್ರೀಯ ನಾಯಕಿ ಬೇಗಂ ಖಲೀದಾ ಜಿಯಾ ಅವರು ಕೊನೆಯುಸಿರೆಳೆದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಪ್ರಾರ್ಥಿಸುತ್ತೇವೆ' ಎಂದು ತಿಳಿಸಿದೆ.
ಖಲೀದಾ ಅವರು ಯಕೃತ್ತಿನ ಸಮಸ್ಯೆ, ಸಂಧಿವಾತ, ಮಧುಮೇಹ, ಹೃದಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ವೈದ್ಯರ ಹೇಳಿಕೆ ಉಲ್ಲೇಖಿಸಿ ವರದಿಯಾಗಿದೆ.

