ಮುಳ್ಳೇರಿಯ: ಕಾರಡ್ಕ ಗ್ರಾಮ ಪಂಚಾಯತಿನ ಪುಟ್ಟನಮೂಲ, ಮುಳಿಯಾರ್ ಗ್ರಾಮ ಪಂಚಾಯತಿನ ವಡಕ್ಕೆಕ್ಕರ ಮತ್ತು ಬೆಡಡ್ಕ ಗ್ರಾಮ ಪಂಚಾಯತಿನ ಕಾನತಿಲ್ ಯೆಂಬ ಸ್ಥಳಗಳಲ್ಲಿ 1 ರಿಂದ 8 ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಗೆ 3 ತಿಂಗಳ ಅವಧಿಗೆ ಬೋಧನೆ ನೀಡಲು ಬೋಧನಾ ಶಿಕ್ಷಕರನ್ನು ನೇಮಿಸಲಾಗುತ್ತಿದೆ. ಪದವಿ, ಬಿ.ಎಡ್ ಅರ್ಹತೆ ಹೊಂದಿರುವ ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಅನುಪಸ್ಥಿತಿಯಲ್ಲಿ, ಇತರ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ. ಸ್ಥಳೀಯ ನಿವಾಸಿಗಳಿಗೆ ಆದ್ಯತೆ ನೀಡಲಾಗುವುದು. ಮಾಸಿಕ ಗೌರವ ಧನ 7000 ರೂಪಾಯಿ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ಕಾರಡ್ಕ ಬ್ಲಾಕ್ ಪಂಚಾಯತಿನಲ್ಲಿರುವ ಪರಿಶಿಷ್ಟ ಜಾತಿ ಅಭಿವೃದ್ಧಿ ಕಚೇರಿಯಲ್ಲಿ ಬಿಳಿ ಕಾಗದದ ಮೇಲೆ ಸಿದ್ಧಪಡಿಸಿದ ಅರ್ಜಿ - ಬಯೋ-ಡೇಟಾ ಮತ್ತು ಪ್ರಮಾಣಪತ್ರಗಳ ಪ್ರತಿಗಳೊಂದಿಗೆ ಹಾಜರಾಗಬೇಕು.

