ಮಂಜೇಶ್ವರ: ಆನೆಕಲ್ಲು ನಿವಾಸಿ, ವರ್ಕಾಡಿ ಧರ್ಮನಗರ ಮಣವಾಟಿ ಬೀವಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಾಪಕ ಗೋಪಾಲ ನಾಯ್ಕ( 47)ಹೃದಯಾಘಾತದಿಂದ ನಿಧನರಾದರು. ಶುಕ್ರವಾರ ಮಧ್ಯಾಹ್ನ ಎದೆನೋವಿನಿಂದ ಕುಸಿದು ಬಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿರಲಿಲ್ಲ. ಕಳೆದ 17 ವರ್ಷಗಳಿಂದ ಶಿಕ್ಷಕರಾಗಿ ಸೇವೆಸಲ್ಲಿಸುತ್ತಿದ್ದರು. ಅವರು ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.


