ಬದಿಯಡ್ಕ: ಚಿನ್ಮಯ ವಿದ್ಯಾಲಯ ಬದಿಯಡ್ಕ ವಾರ್ಷಿಕೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಿತು. ಕೇರಳ ಚಿನ್ಮಯ ಮಿಷನಿನ ಮುಖ್ಯಸ್ಥ ಹಾಗೂ ಕಾಸರಗೋಡು ಚಿನ್ಮಯ ವಿದ್ಯಾಲಯದ ಅಧ್ಯಕ್ಷ ವಿವಿಕ್ತಾನಂದ ಸರಸ್ವತಿ ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀನಿವಾಸ ರಾವ್ (ಕಾಸರಗೋಡು ಚಿನ್ನ) ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದು ಕಲೆ, ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಥಿ ಜೀವನ ಸುಗಮವಾಗಿ ಮುಂದುವರೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ವಿದ್ಯಾಲಯದ ಪ್ರಾಂಶುಪಾಲೆ ಮಾನಸ ವಾರ್ಷಿಕ ವರದಿಯನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಶೈಕ್ಷಣಿಕ ವರ್ಷದಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳ ಸಾಧನೆಗೆ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಮೂಡಿ ಬಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸ್ಸನ್ನು ರಂಜಿಸಿತು. ವಿದ್ಯಾರ್ಥಿಗಳಾದ ಶ್ರೀಜ ಆಳ್ವ ಸ್ವಾಗತಿಸಿ, ವಿದ್ಯಾರ್ಥಿ ಚಾರ್ವಿ ವಂದಿಸಿದರು. ಶಿಕ್ಷಕರು, ಶಾಲಾ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳ ಹೆತ್ತವರು ಪಾಲ್ಗೊಂಡಿದ್ದರು.




.jpg)
