HEALTH TIPS

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪುತ್ರನಿಗೆ ಕಂಕಣ ಭಾಗ್ಯ: ವಾದ್ರಾ ಕುಟುಂಬದ ಭಾವಿ ಸೊಸೆ ಯಾರು ಗೊತ್ತೆ?

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ರೈಹಾನ್ ಅವರು ತಮ್ಮ ದೀರ್ಘಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ಇತ್ತೀಚೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ, ಈಗ ಮದುವೆಯಾಗಲು ನಿರ್ಧರಿಸಿದ್ದಾರೆ. ರೈಹಾನ್ ಅವರು ಅವೀವಾ ಅವರಿಗೆ ವಿವಾಹ ಪ್ರಸ್ತಾಪ ಮಾಡಿದ್ದು, ಅದಕ್ಕೆ ಅವಿವಾ ಸಮ್ಮತಿ ಸೂಚಿಸಿದ್ದಾರೆ. ಈ ಸಂಬಂಧಕ್ಕೆ ಉಭಯ ಕುಟುಂಬಗಳೂ ಹಸಿರು ನಿಶಾನೆ ತೋರಿಸಿದ್ದು, ಶೀಘ್ರದಲ್ಲೇ ವಿವಾಹದ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.

ರೈಹಾನ್ ವಾದ್ರಾ ವೃತ್ತಿಯಲ್ಲಿ ಒಬ್ಬ ಪರಿಣಿತ ಛಾಯಾಗ್ರಾಹಕನಾಗಿದ್ದು. ತಮ್ಮ ಹತ್ತನೇ ವಯಸ್ಸಿಗೇ ಕ್ಯಾಮೆರಾ ಕೈಗೆತ್ತಿಕೊಂಡ ರೈಹಾನ್ ವನ್ಯಜೀವಿ, ಬೀದಿ ಛಾಯಾಗ್ರಹಣ ಮತ್ತು ಕಮರ್ಷಿಯಲ್ ಫೋಟೋಗ್ರಫಿಯಲ್ಲಿ ಗುರುತಿಸಿಕೊಂಡಿದ್ದಾರೆ.

ಹಾಗೆಯೇ ಅವಿವಾ ಬೇಗ್ ಅವರು ಮೂಲತಃ ದೆಹಲಿ ಮೂಲದವರಾಗಿದ್ದು, ಇವರು ಕೂಡ ವೃತ್ತಿಯಲ್ಲಿ ಛಾಯಾಗ್ರಾಹಕಿ ಮತ್ತು ನಿರ್ಮಾಪಕಿ ಆಗಿದ್ದು, ದೆಹಲಿಯಲ್ಲಿ 'ಅಟೆಲಿಯರ್ 11' ಎಂಬ ಫೋಟೋಗ್ರಫಿ ಸ್ಟುಡಿಯೋವನ್ನು ನಡೆಸುತ್ತಿದ್ದಾರೆ.

ಅಷ್ಟು ಮಾತ್ರವಲ್ಲದೆ ಇವರು ರಾಷ್ಟ್ರಮಟ್ಟದ ಮಾಜಿ ಫುಟ್ಬಾಲ್ ಆಟಗಾರ್ತಿಯಾಗಿದ್ದಾರೆ. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕುಟುಂಬದ ಆಪ್ತರು ಮಾತ್ರ ಭಾಗಿಯಾಗಿದ್ದು ಶೀಘ್ರದಲ್ಲೇ ಮದುವೆ ದಿನಾಂಕವನ್ನು ಕುಟುಂಬ ಘೋಷಣೆ ಮಾಡಲಿದೆ.

ರೈಹಾನ್ ವಾದ್ರಾ ಡೆಹ್ರಾಡೂನ್‌ನ ದಿ ಡೂನ್ ಶಾಲೆಯಲ್ಲಿ ವ್ಯಾಸಂಗ ಮಾಡಿದರು, ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಅದೇ ಶಾಲೆಯಲ್ಲಿ ಅಧ್ಯಯನ ಮಾಡಿದರು. ನಂತರ ಅವರು ರಾಜಕೀಯದಲ್ಲಿ ಉನ್ನತ ಶಿಕ್ಷಣಕ್ಕಾಗಿ ಲಂಡನ್‌ನಲ್ಲಿರುವ ಸ್ಕೂಲ್ ಆಫ್ ಓರಿಯಂಟಲ್ ಮತ್ತು ಆಫ್ರಿಕನ್ ಸ್ಟಡೀಸ್ (SOAS) ಗೆ ತೆರಳಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries