ಕಾಸರಗೋಡು: ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಮೂರರ ಹರೆಯದ ಬಾಲಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೊಗ್ರಾಲ್‍ಪುತ್ತೂರು ಮಜಲ್ ಜಗದಂಬಾ ನಿಲಯದ, ಗಲ್ಫ್ ಉದ್ಯೋಗಿ ಪ್ರಶಾಂತ್ ಕುಮಾರ್-ಮಾಳವಿಕಾ ದಂಪತಿ ಪುತ್ರ ಅಶ್ವಿಕ್ ಪಿ ಮೃತಪಟ್ಟ ಬಾಲಕ.
ಉಸಿರಾಟ ಸಮಸ್ಯೆ ಹಿನ್ನೆಲೆಯಲ್ಲಿ ಬಾಲಕನನ್ನು ಡಿ. 17ರಂದು ವಿದ್ಯಾನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಉನ್ನತ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಕಾಗಿತ್ತು. ಗುಣಮುಖನಾಗಿ ಮನೆಗೆ ವಾಪಸಾದ ಕೆಲವೇ ದಿವಸಗಳಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕನನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿರಲಿಲ್ಲ.

