ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ರಿಜಿಸ್ಟರ್ಡ್ ಕಾಸರಗೋಡು ತಾಲೂಕಿನ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.
ಕಾಸರಗೋಡು ತಾಲೂಕು ತಹಸಿಲ್ದಾರ್ ರಮೇಶನ್ ಕೆ. ಸಮಾರಂಭ ಉದ್ಘಾಟಿಸಿದರು. ಕಾಸರಗೋಡು ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಜ್ಞಾನೇಶ್ವರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮತ್ತು ಮಹಿಳಾ ಸಂರಕ್ಷಣಾಧಿಕಾರಿ ಜ್ಯೋತಿ ಪಿ ಸರ್ಕಾರದ ಸವಲತ್ತುಗಳ ಬಗ್ಗೆ ಮಾಹಿತಿ ನಿಡಿದರು. ಉಕ್ಕಿರ್ನಡ್ಕಾಸ್ ಆಯುರ್ವೇದ ಆಸ್ಪತ್ರೆಯ ಡಾ. ಸಪ್ನಾ ಜೆ ರವರು. ಸದೃಢ ಮಹಿಳೆಗೆ ಆರೋಗ್ಯದ ಪ್ರಾಮುಖ್ಯತೆ ಎಂಬ ವಿಷಯದ ಕುರಿತು ವಿಚಾರಗೋಷ್ಠಿ ನಡೆಸಿಕೊಟ್ಟರು.
ತಾಲೂಕು ಸಮನ್ವಯಾಧಿಕಾರಿ ಸೌಮ್ಯ ತಾಲೂಕಿನ ಜ್ಞಾನವಿಕಾಸ ಕಾರ್ಯಕ್ರಮಗಳ ವಾರ್ಷಿಕ ವರದಿ ಮಂಡಿಸಿದರು. ಈ ಸಂದರ್ಭ ಕೇಂದ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಹಿರಿಯ ಸದಸ್ಯೆಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಯಿತು. ತಾಲೂಕಿನಲ್ಲಿ ಉದ್ಘಾಟನೆಯಾದ ನೂತನ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರಕ್ಕೆ ದಾಖಲಾತಿ ಹಸ್ತಾಂತರ, ಮಕರಂದ ಜ್ಞಾನ ವಿಕಾಸ ಕೇಂದ್ರಕ್ಕೆ ಉತ್ತಮ ಕೇಂದ್ರಕ್ಕಿರುವ ಪ್ರಮಾಣ ಪತ್ರ ವಿತರಣೆ, ಮಾಸಾಶನ ಕೈಪಿಡಿ ವಿತರಣೆ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ತಾಲೂಕು ಯೋಜನಾಧಿಕಾರಿ ದಿನೇಶ್ ಸ್ವಾಗತಿಸಿದರು. ತಾಲೂಕು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಕಾಸರಗೋಡು ವಲಯ ಮೇಲ್ವಿಚಾರಕ ಗೋಪಾಲಕೃಷ್ಣ ವಂದಿಸಿದರು.
ಈ ಸಂದರ್ಭ ನಡೆದ ಸಾಂಸ್ಕೃತಿಕ ಕಾರ್ಯಕ್ರಮದದಲ್ಲಿ ನಿವೃತ್ತ ಶಿಕ್ಷಕಿ ಪ್ರೇಮಲತಾ ಟೀಚರ್ ಮತ್ತು ವಂದನ ಟೀಚರ್ ತೀರ್ಪುಗಾರರಾಗಿ ಸಹಕರಿಸಿದರು. ಶೌರ್ಯವಿಪತ್ತು ಘಟಕದ ಸದಸ್ಯರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರು,ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.


