HEALTH TIPS

ಆಪರೇಷನ್ ಸಿಂಧೂರದ ಮೊದಲ ದಿನವೇ ಭಾರತ ಸೋತಿತ್ತು: 'ಕೈ' ನಾಯಕ ಪೃಥ್ವಿರಾಜ್ ವಿವಾದ

 ಪುಣೆ: 'ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ವಿರುದ್ಧ ನಡೆಸಿದ 'ಆಪರೇಷನ್ ಸಿಂಧೂರ' ಸೇನಾ ಕಾರ್ಯಾಚರಣೆಯ ಮೊದಲ ದಿನವೇ ಭಾರತಕ್ಕೆ ಸೋಲಾಯಿತು ಮತ್ತು ನಾಲ್ಕು ದಿನಗಳ ಸಂಘರ್ಷದಲ್ಲಿ ನಮ್ಮ ಹಲವು ವಿಮಾನಗಳನ್ನು ಹೊಡೆದುರುಳಿಸಲಾಯಿತು' ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಪುಣೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, 'ಪಾಕಿಸ್ತಾನವನ್ನು ಎದುರಿಸುವ ಸಾಮರ್ಥ್ಯವಿದ್ದರೂ ಭಾರತೀಯ ವಾಯುಪಡೆಯು ಸಂಪೂರ್ಣ ನಿಷ್ಕ್ರಿಯವಾಗಿತ್ತು' ಎಂದಿದ್ದಾರೆ.

'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿದ ಮೊದಲ ದಿನವೇ ನಾವು ಸಂಪೂರ್ಣವಾಗಿ ಸೋತಿದ್ದೇವೆ. ದೇಶದ ಜನರು ಇದನ್ನು ಒಪ್ಪಿಕೊಂಡರೂ ಇಲ್ಲದಿದ್ದರೂ ನಾವು ಸಂಪೂರ್ಣವಾಗಿ ಸೋತಿದ್ದೇವೆ ಎಂಬುದು ಸ್ಪಷ್ಟ. ಭಾರತದ ವಿಮಾನಗಳನ್ನು ಹೊಡೆದುರುಳಿಸುವ ಮೂಲಕ ವಾಯುಪಡೆಯನ್ನು ಸಂಪೂರ್ಣವಾಗಿ ನೆಲಸಮ ಮಾಡಲಾಯಿತು. ಗ್ವಾಲಿಯರ್, ಬಟಿಂಡಾ ಅಥವಾ ಸಿರ್ಸಾದಿಂದ ಯಾವುದೇ ವಿಮಾನ ಹಾರಾಟ ನಡೆಸಿದ್ದರು, ಪಾಕಿಸ್ತಾನ ಅದನ್ನು ಹೊಡೆದುರುಳಿಸುವ ಸಾಧ್ಯತೆ ಇತ್ತು' ಎಂದು ಚವಾಣ್ ಹೇಳಿದ್ದಾರೆ.

'ಆಪರೇಷನ್ ಸಿಂಧೂರ ಕಾರ್ಯಾಚರಣೆ ಸಮಯದಲ್ಲಿ ನಾವು ನೋಡಿದ್ದೇವೆ. ಮಿಲಿಟರಿಯ ಒಂದು ಕಿಲೋಮೀಟರ್ ಚಲನೆಯೂ ಇರಲಿಲ್ಲ. ಎರಡು ಅಥವಾ ಮೂರು ದಿನಗಳಲ್ಲಿ ಏನೇ ನಡೆದರೂ ಅದು ಕೇವಲ ವೈಮಾನಿಕ ಯುದ್ಧ ಮತ್ತು ಕ್ಷಿಪಣಿ ಯುದ್ಧವಾಗಿತ್ತು. ಭವಿಷ್ಯದಲ್ಲಿಯೂ ಸಹ, ಯುದ್ಧಗಳು ಅದೇ ರೀತಿಯಲ್ಲಿ ನಡೆಯುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ನಾವು ನಿಜವಾಗಿಯೂ 12 ಲಕ್ಷ ಸೈನಿಕರ ಸೈನ್ಯವನ್ನು ನಿರ್ವಹಿಸುವ ಅಗತ್ಯವಿದೆಯೇ ಅಥವಾ ಅವರಿಂದ ಬೇರೆ ಏನಾದರೂ ಕೆಲಸ ಮಾಡಿಸಲು ನಾವು ಒತ್ತಾಯಿಸಬಹುದೇ' ಎಂದು ಚವಾಣ್ ಪ್ರಶ್ನಿಸಿದ್ದಾರೆ.

ಪೃಥ್ವಿರಾಜ್ ಹೇಳಿಕೆಗೆ ಬಿಜೆಪಿ ಖಂಡನೆ

ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಪೃಥ್ವಿರಾಜ್ ಚವಾಣ್ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್‌ ಪೂನಾವಾಲ,'ಕಾಂಗ್ರೆಸ್ ನಾಯಕರು ಭಾರತೀಯ ಸಶಸ್ತ್ರ ಪಡೆಗಳನ್ನು ದ್ವೇಷಿಸುತ್ತಾರೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ' ಎಂದಿದ್ದಾರೆ.









ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries