ನವದೆಹಲಿ: ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗಲು ಬಯಸುವ ಪರಿಶಿಷ್ಟ ಪಂಗಡದ(ಎಸ್ಟಿ) ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನಗಳ ಸಂಖ್ಯೆಯನ್ನು ಪ್ರಸ್ತುತ 20ರಿಂದ 50ಕ್ಕೆ ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರ ಸಚಿವ ಜುವಾಲ್ ಓರಾಂ ಅವರು ಲೋಕಸಭೆಗೆ ಗುರುವಾರ ತಿಳಿಸಿದರು.
ವಿದೇಶ ವ್ಯಾಸಂಗಕ್ಕೆ ವಿದ್ಯಾರ್ಥಿವೇತನಗಳ ಸಂಖ್ಯೆ ಏಕೆ ಕಡಿಮೆಯಿದೆ ಎಂಬ ವಿರೋಧ ಪಕ್ಷದ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿದ ಜುವಾಲ್ ಓರಾಂ ಅವರು, 'ದೀರ್ಘ ಕಾಲದವರೆಗೆ ಅಧಿಕಾರದಲ್ಲಿದ್ದಾಗ ಬುಡಕಟ್ಟು ಜನರ ಕಲ್ಯಾಣಕ್ಕೆ ವಿರೋಧ ಪಕ್ಷವು ಏನನ್ನೂ ಮಾಡಿಲ್ಲ' ಎಂದು ಹೇಳಿದರು.

