ಕಾಸರಗೋಡು: ಕಳ್ಳಾರು ಪುಂಜಕ್ಕರ ಕೋಟಕುನ್ನು ಎಂಬಲ್ಲಿ ವ್ಯಕ್ತಿಯೊಬ್ಬರ ಹಿತ್ತಿಲಲ್ಲಿ ಚಿರತೆ ಕಳೇಬರ ಪತ್ತೆಯಾಗಿದೆ. ಚಿರತೆ ಕಳೇಬರ ಜೀರ್ಣಾವಸ್ಥೆಯಲ್ಲಿದ್ದು, ಕೆಲವು ದಿವಸಗಳ ಹಿಂದೆ ಸಾವಿಗೀಡಾಗಿರಬೇಕೆಂದು ಸಂಶಯಿಸಲಾಗಿದೆ. ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಮರಣೋತ್ತರ ಪರೀಕ್ಷೆ ನಂತರ ಸಾವಿಗೆ ಕಾರಣ ತಿಳಿದುಬರಲಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

