ಮಂಜೇಶ್ವರ: ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಮಾಡದ ಜಾತ್ರಾ ಮಹೋತ್ಸವ ಜ.20 ರಿಂದ 22ರ ವರೆಗೆ ವಿವಿಧ ಧಾರ್ಮಿಕ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಈ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಬಿಡುಗಡೆಗೊಳಿಸಿದರು.
ಅಧ್ಯಕ್ಷ ಡಾ.ಶ್ರೀಧರ ಭಟ್ ಉಪ್ಪಳ, ಪದಾಧಿಕಾರಿಗಳಾದ ಎಂ.ಜಿ. ನಾರಾಯಣ ರಾವ್, ತಂತ್ರಿಗಳಾದ ಯೋಗೀಶ್ ಭಟ್, ಮಂಜೇಶ್ವರ ತಾಲೂಕಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಶಶಿಕಲ ಸುವರ್ಣ, ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತಸರ ವಸಂತ ಭಟ್ ತೊಟ್ಟತ್ತೋಡಿ ಹಾಗೂ ಸ್ವಯಂಸೇವಕರು ಉಪಸ್ಥಿತರಿದ್ದರು.

.jpg)
