HEALTH TIPS

ಉನ್ನಾವೊ ಅತ್ಯಾಚಾರ ಪ್ರಕರಣ: ಸೆಂಗರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸಿಬಿಐ ಮೇಲ್ಮನವಿ

 ನವದೆಹಲಿ: ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್‌ ಸಿಂಗ್‌ ಸೆಂಗರ್‌ ಅನುಭವಿಸುತ್ತಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಷರತ್ತುಬದ್ಧ ಜಾಮೀನು ನೀಡಿರುವ ದೆಹಲಿ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ(Special Leave Petition) ಸಲ್ಲಿಸಿದೆ. 


ಉನ್ನಾವೊ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನ ವಿಭಾಗೀಯ ಪೀಠ ನೀಡಿದ ತೀರ್ಪನ್ನು ಅಧ್ಯಯನ ಮಾಡಿದ ನಂತರ ಮೇಲ್ಮನವಿ(ಎಸ್‌ಎಲ್‌ಪಿ) ಸಲ್ಲಿಸಲಾಗಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.

ಹೈಕೋರ್ಟ್‌ ಮುಂದೆ ಪ್ರತಿಭಟನೆ:

ಸೆಂಗರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಸಂತ್ರಸ್ತೆ, ಅವರ ತಾಯಿ ಮತ್ತು ಮಹಿಳಾ ಪರ ಹೋರಾಟಗಾರರು ದೆಹಲಿ ಹೈಕೋರ್ಟ್‌ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ. ಸೆಂಗರ್‌ಗೆ ನೀಡಿರುವ ಜಾಮೀನನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಸಾಮಾಜಿಕ ಹೋರಾಟಗಾರರಾದ ವಕೀಲೆ ಭಯನಾ ಮತ್ತು ಅಖಿಲ ಭಾರತ ಮಹಿಳಾ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

- ಸಂತ್ರಸ್ತೆಯ ತಾಯಿ ನಾನು ಇಡೀ ಹೈಕೋರ್ಟ್‌ ಅನ್ನು ದೂಷಿಸುವುದಿಲ್ಲ. ಆದರೆ ಇಬ್ಬರು ನ್ಯಾಯಮೂರ್ತಿಗಳು ನಮ್ಮ ನಂಬಿಕೆಯನ್ನು ನುಚ್ಚು ನೂರು ಮಾಡಿದ್ದಾರೆ. ಹಿಂದಿನ ನ್ಯಾಯಮೂರ್ತಿ ಅವರು ನಮಗೆ ನ್ಯಾಯ ಒದಗಿಸಿದ್ದರು. ಆದರೆ ಈಗ ಅಪರಾಧಿಗೆ ಜಾಮೀನು ಸಿಕ್ಕಿದೆಅತ್ಯಾಚಾರ ಅಪರಾಧಿ ಸೆಂಗರ್‌ ಶಿಕ್ಷೆ ಅಮಾನತು: ದೆಹಲಿ ಕೋರ್ಟ್‌ ಮುಂದೆ ಪ್ರತಿಭಟನೆ

ಉನ್ನಾವೊ ಅತ್ಯಾಚಾರ ಪ್ರಕರಣ ಸಂಬಂಧ 2019ರಲ್ಲಿ ದೆಹಲಿಯ ವಿಚಾರಣಾ ನ್ಯಾಯಾಲಯ ಸೆಂಗರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದನ್ನು ಪ್ರಶ್ನಿಸಿ ಸೆಂಗರ್ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಇತ್ಯರ್ಥ ಆಗುವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ ದೆಹಲಿ ಹೈಕೋರ್ಟ್‌ ಮಂಗಳವಾರ ತೀರ್ಪು ನೀಡಿ, ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಈ ಪ್ರಕರಣದ ಶಿಕ್ಷೆ ಅಮಾನತುಗೊಂಡಿದ್ದರೂ ಸಂತ್ರಸ್ತೆ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಸೆಂಗರ್‌ಗೆ 10 ವರ್ಷಗಳ ಶಿಕ್ಷೆಯಾಗಿದೆ. ಹೀಗಾಗಿ ಅವರು ಜೈಲಿನಲ್ಲಿಯೇ ಇರುತ್ತಾರೆ ಎಂದೂ ನ್ಯಾಯಾಲಯ ಹೇಳಿದೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries