ಉಪ್ಪಳ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ಮಸ್ಕತ್, ಒಮಾನ್ ಘಟಕ ಹಾಗೂ ಕಾಸರಗೋಡು ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಮಸ್ಕತ್, ಒಮಾನ್ ಘಟಕಗಳ ಆಶ್ರಯದಲ್ಲಿ 2026ರ ಮೇ.8 ರಂದು ಒಮಾನ್ ನ ಮಸ್ಕತ್ ಸಿ.ಬಿ.ಎಫ್.ಸಿ. ಹಾಲ್ ಹೌಶೆರ್ ನಲ್ಲಿ ಆಯೋಜಿಸಲಾಗಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಪೈವಳಿಕೆ ಕಾಯರ್ ಕಟ್ಟೆ ಸರ್ಕಾರಿ ಹೈಸ್ಕೂಲಿನಲ್ಲಿ ನಡೆದ ಗಡಿನಾಡ ಕನ್ನಡ ರಾಜ್ಯೋತ್ಸವ ಸಮಾರಂಭದ ಉದ್ಘಾಟನಾ ವೇದಿಕೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಬಿಡುಗಡೆಗೊಳಿಸಿ ಶುಭಹಾರೈಸಿದರು.
ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿ ಸಂಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಹಿರಿಯ ಪತ್ರಕರ್ತ ಬಿ.ಎಂ.ಹನೀಫ್, ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಒಮಾನ್ ಘಟಕ ಅಧ್ಯಕ್ಷ ಶಿವಾನಂದ ಕೋಟ್ಯಾನ್ ಕಟಪಾಡಿ, ಧಾರ್ಮಿಕ ಮುಂದಾಳು ಮಹಾಬಲೇಶ್ವರ ಭಟ್ ಎಡಕ್ಕಾನ, ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಅಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಕಾರ್ಮಿಕ ಪರಿಷತ್ತು ಬೆಂಗಳೂರು ಅಧ್ಯಕ್ಷ ಡಾ.ರವಿಶೆಟ್ಟಿ ಬೈಂದೂರು, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತ ಗಟ್ಟಿ, ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಜಿಲ್ಲಾಧ್ಯಕ್ಷ ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ ತೆಕ್ಕೇಮೂಲೆ, ಅಕಾಡೆಮಿ ಅಧ್ಯಕ್ಷ ಚನಿಯಪ್ಪ ನಾಯ್ಕ ಎನ್., ಕಾರ್ಯದರ್ಶಿ ಅಖಿಲೇಶ್ ನಗುಮುಗಂ, ಕೋಶಾಧಿಕಾರಿ ಜೆಡ್.ಎ.ಕಯ್ಯಾರ್, ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ್ ಎ., ನಾಂಸ್ಕೃತಿಕ, ಧಾರ್ಮಿಕ ಮುಖಂಡ ಅರಿಬೈಲು ಗೋಪಾಲ ಶೆಟ್ಟಿ, ಕನ್ನಡ ಭವನ ಕಾಸರಗೋಡು ಸಂಸ್ಥಾಪಕ ವಾಮನ ರಾವ್ ಬೇಕಲ್, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ ಬಿ ಎನ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಕರ್ನಾಟಕ ಜಾನಪದ ಪರಿಷತ್ತು ದ.ಕ. ಜಿಲ್ಲಾ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ಉದ್ಯಮಿ ಯುವರಾಜ ಸಾಲಿಯಾನ್, ಕರ್ನಾಟಕ ಜಾನಪದ ಪರಿಷತ್ತು ಕೇರಳ ಘಟಕದ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಎಸ್ ನಾಸಿ. ಗಮಕ ಕಲಾ ಪರಿಷತ್ತು ಅಧ್ಯಕ್ಷ ಟಿ ಶಂಕರಣರಾಯಣ ಭಟ್, ಶಾಲಾ ಪ್ರಾಂಶುಪಾಲ ಡೊಮಿನಿಕ್ ಆಗಸ್ಟಿನ್, ಮುಖ್ಯೋಪಾಧ್ಯಾಯಿನಿ ಭಾಗ್ಯಲಕ್ಷ್ಮಿ, ಆದಂ ಬಳ್ಳೂರು, ಸುಮಿತ್ರಾ, ರಮೇಶ್ ಶೆಟ್ಟಿ ಬೈಂದೂರ್, ಅಸೀಸ್ ಕಳಾಯಿ, ವಿದುಷಿ ತೀರ್ಥ ಕಟೀಲು, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯಕಟ್ಟೆ, ರವಿ ನಾಯ್ಕಾಪು ಮತ್ತಿತರರು ಉಪಸ್ಥಿತರಿದ್ದರು.




.jpg)

