ಕೋಝಿಕೋಡ್: ಶಬರಿಮಲೆ ಚಿನ್ನ ದರೋಡೆ ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋತ್ತಿ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆಗಿರುವ ಚಿತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಕಾಂಗ್ರೆಸ್ ನಾಯಕನ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೆಪಿಸಿಸಿ ರಾಜಕೀಯ ವ್ಯವಹಾರಗಳ ಸಮಿತಿ ಸದಸ್ಯ ಎನ್. ಸುಬ್ರಮಣಿಯನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಉದ್ವಿಗ್ನತೆಯನ್ನು ಸೃಷ್ಟಿಸುವ ಉದ್ದೇಶದಿಂದ ನಕಲಿ ಚಿತ್ರವನ್ನು ಪ್ರಸಾರ ಮಾಡಲಾಗಿದೆ ಎಂಬ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಉನ್ನಿಕೃಷ್ಣನ್ ಪೆÇಟ್ಟಿ ನಡುವೆ "ಆಳವಾದ ಬಾಂಧವ್ಯ" ಇದೆ ಎಂದು ಸೂಚಿಸುವ ಶೀರ್ಷಿಕೆಯೊಂದಿಗೆ ಸುಬ್ರಮಣಿಯನ್ ಚಿತ್ರವನ್ನು ಹಂಚಿಕೊಂಡಿದ್ದರು.
ಚಿತ್ರಕ್ಕೆ ನೀಡಲಾದ ಶೀರ್ಷಿಕೆ "ಪಿಣರಾಯಿ ಮತ್ತು ಉಣ್ಣಿಕೃಷ್ಣನ್ ಪೋತ್ತಿ ನಡುವೆ ಇಷ್ಟೊಂದು ಆಳವಾದ ಬಾಂಧವ್ಯಕ್ಕೆ ಕಾರಣವೇನು?" ಎಮದಿದೆ. ಎಲ್‍ಡಿಎಫ್ ಮತ್ತು ಯುಡಿಎಫ್ ಕಾರ್ಯಕರ್ತರ ನಡುವೆ ಸಂಘರ್ಷ ಉಂಟುಮಾಡುವ ಉದ್ದೇಶದಿಂದ ಪೆÇೀಸ್ಟ್ ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಿ ಕೋಝಿಕೋಡ್ ಚೆವಾಯೂರ್ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.

