ಮಾಸ್ಕೊ: ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತು ಸಾಗಿ, ಗುರಿ ನಾಶ ಮಾಡಬಲ್ಲ ಸಾಮರ್ಥ್ಯ ಹೊಂದಿರುವ ಒರೆಶ್ನಿಕ್ ಕ್ಷಿಪಣಿ ವ್ಯವಸ್ಥೆ ದೇಶದ ಸೇನೆಯ ಬತ್ತಳಿಕೆ ಸೇರಿದೆ ಎಂದು ರಷ್ಯಾ ರಕ್ಷಣಾ ಸಚಿವಾಲಯ ಮಂಗಳವಾರ ಹೇಳಿದೆ.
ಉಕ್ರೇನ್ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ಅಂತ್ಯಗೊಳಿಸಿ, ಶಾಂತಿ ಸ್ಥಾಪನೆ ಕುರಿತು ಮಾತುಕತೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ, ಈ ಕ್ಷಿಪಣಿ ವ್ಯವಸ್ಥೆಯನ್ನು ನಿಯೋಜಿಸಿರುವುದಾಗಿ ರಷ್ಯಾ ಹೇಳಿದೆ.
ನೆರೆ ರಾಷ್ಟ್ರ ಬೆಲರೂಸ್‌ನಲ್ಲಿ ಈ ಕ್ಷಿಪಣಿ ವ್ಯವಸ್ಥೆಯನ್ನು ನಿಯೋಜನೆ ಮಾಡಲಾಗಿದೆ. ಇದರ ಅಂಗವಾಗಿ ಸೇನೆ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು ಎಂದು ಸಚಿವಾಲಯ ತಿಳಿಸಿದೆ. ಆದರೆ, ಇಂತಹ ಎಷ್ಟು ಕ್ಷಿಪಣಿ ವ್ಯವಸ್ಥೆಗಳನ್ನು ನಿಯೋಜನೆ ಮಾಡಲಾಗಿದೆ ಎಂಬ ಬಗ್ಗೆ ಅದು ಹೆಚ್ಚಿನ ವಿವರಗಳನ್ನು ನೀಡಿಲ್ಲ.

