ಮಂಜೇಶ್ವರ: ಮಂಜೇಶ್ವರ ಅಬಕಾರಿ ಚೆಕ್‍ಪೋಸ್ಟ್‍ನಲ್ಲಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 12ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಪೆರ್ಲ ಸನಿಹದ ಕಾಟುಕುಕ್ಕೆ ಪೆರ್ಲತ್ತಡ್ಕ ನಿವಾಸಿ ಅಬ್ದುಲ್ ಸಮದ್(37)ಎಂಬಾತನನ್ನು ಬಂಧಿಸಿದ್ದಾರೆ.
ಮಂಗಳೂರಿನಿಂದ ಕಾಸರಗೋಡಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಅಬ್ದುಲ್ ಸಮದ್‍ನನ್ನು ತಪಾಸಣೆಗೊಳಪಡಿಸಿದಾಗ ಗಾಂಜಾ ಪತ್ತೆಯಾಗಿದೆ. ಕಾಟುಕುಕ್ಕೆ ಹಾಗೂ ಪೆರ್ಲದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿರುವುದಾಗಿ ಆರೋಪಿ ಅಧಿಕಾರಿಗಳಿಗೆ ಮಾಹಿತಿನೀಡಿದ್ದಾನೆ. ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಅಬಕಾರಿ ದಳ ಕಾರ್ಯಾಚರಣೆ ಚುರುಕುಗೊಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

