ಕುಂಬಳೆ: ಕಾಸರಗೋಡಿನ ಕವಿ, ಪತ್ರಕರ್ತ, ಕಾರ್ಯನಿರತ ಪತ್ರಕರ್ತರ ಸಂಘದ ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರು 2025ನೇ ಸಾಲಿನ ಕಾಂತಾವರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹಿರಿಯ ಸಾಹಿತಿ ಡಾ.ನಾ. ಮೊಗಸಾಲೆ ಕುಟುಂಬದವರು ಸ್ಥಾಪಿಸಿದ ಈ ಪ್ರಶಸ್ತಿಯು ಹತ್ತು ಸಾವಿರ ರೂ. ನಗದು ಮತ್ತು ತಾಮ್ರ ಪತ್ರವನ್ನೊಳಗೊಂಡಿದೆ.
ಕಾಂತಾವರ ಕನ್ನಡ ಸಂಘದ ಐವತ್ತರ ಸಂಭ್ರಮದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಡಿ. 28 ರಂದು ಕನ್ನಡ ಭವನದಲ್ಲಿ ನಡೆಯಲ್ಲಿದ್ದು ಹಿರಿಯ ಸಾಹಿತಿ, ನಿವೃತ್ತ ಪ್ರಾಧ್ಯಾಪಕ ಡಾ. ಮೋಹನ ಕುಂಟಾರ್ ಉದ್ಘಾಟಿಸುವರು. ಧರ್ಮದರ್ಶಿ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿ ಪ್ರಶಸ್ತಿ ಪ್ರದಾನ ಮಾಡುವರು. ಸಾಹಿತ್ಯ ಮತ್ತು ಪತ್ರಿಕೋದ್ಯಮ ಸಾಧನೆಗಾಗಿ ಈಗಾಗಲೇ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದುಕೊಂಡಿರುವ ರಾಧಾಕೃಷ್ಣ ಅವರು ಕರ್ನಾಟಕ ಸರ್ಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 2023ನೇ ಸಾಲಿನ ಗಡಿನಾಡ ಚೇತನ ಪ್ರಶಸ್ತಿಗೂ ಪಾತ್ರರಾಗಿದ್ದರು. ಕಾಂತಾವರ ಕನ್ನಡ ಸಂಘದ 'ನಾಡಿಗೆ ನಮಸ್ಕಾರ' ಗ್ರಂಥಮಾಲೆಯಲ್ಲಿ ಅವರ ಎಂಟು ಕೃತಿಗಳು ಪ್ರಕಟವಾಗಿದೆ. ವಿವಿಧ ಪ್ರಕಾರಗಳಲ್ಲಿ ಇಪ್ಪತ್ತೈದಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ ಉಳಿಯತ್ತಡ್ಕರು ಹಲವು ಸ್ಮರಣ ಸಂಚಿಕ, ಅಭಿನಂದನಾ ಗ್ರಂಥಗಳ ಸಂಪಾದಕರಾಗಿ ದುಡಿದಿದ್ದಾರೆ.




.jpg)
