ಧಾರ್: ಭಾರತದಲ್ಲಿ ಆರೋಗ್ಯ ಸಂಸ್ಥೆಗಳಿಗೆ ಬಂದು ಹೆರಿಗೆ ಮಾಡಿಸಿಕೊಳ್ಳುವವರ ಪ್ರಮಾಣ ಶೇ 89ರಷ್ಟು ಹೆಚ್ಚಾಗಿದೆ. ಹೀಗಾಗಿ ತಾಯಂದಿರ ಮರಣ ಪ್ರಮಾಣದಲ್ಲಿ (ಎಂಎಂಆರ್) ಗಣನೀಯ ಇಳಿಕೆ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಮಂಗಳವಾರ ಹೇಳಿದ್ದಾರೆ.
ಧಾರ್ ಜಿಲ್ಲೆಯಲ್ಲಿ ಸಾರ್ವಜನಿಕ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ (ಪಿಪಿಪಿ) ನಿರ್ಮಿಸಲಾಗುತ್ತಿರುವ ವೈದ್ಯಕೀಯ ಕಾಲೇಜಿಗೆ ಶಿಲಾನ್ಯಾಸ ನೆರವೇರಿಸಿ, ನಡ್ಡಾ ಈ ಹೇಳಿಕೆ ನೀಡಿದರು.
ಅಲ್ಲದೇ, ನಾಗರಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸಿಕೊಡಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಶ್ರಮಿಸುತ್ತಿದೆ. ಇದಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

