ಕಾಸರಗೋಡು: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟ್ಟತ್ತಿಲ್ ವಿರುದ್ಧ ಲೈಂಗಿಕ ಕಿರುಕುಳ ನಡೆಸಿ, ಗರ್ಭಪಾತಗೈದಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿರುವ ಸಂತ್ರಸ್ತ ಯುವತಿಯ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಉದುಮ ನಿವಾಸಿ ವಿರುದ್ಧ ಸೈಬರ್ ಕ್ರೈಂ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಉದುಮ ಬಾರಾ ನಿವಾಸಿ ಜಯರಾಜ್ ಎಂಬಾತನಿಗೆ ಈ ಕೇಸು.
ಸಂತ್ರಸ್ತೆಯ ಘನತೆಗೆ ಧಕ್ಕೆ ತಂದೊಡ್ಡುವ ರೀತಿಯಲ್ಲಿ ಫೇಸ್‍ಬುಕ್‍ನಲ್ಲಿ ಜಯರಾಜ್ ಆಕ್ಷೇಪಾರ್ಹ ಬರವಣಿಗೆ ಪೋಸ್ಟ್ ಮಾಡಿರುವ ಬಗ್ಗೆ ಕೇಸು ದಾಖಲಾಗಿದೆ.




