HEALTH TIPS

ತಮಿಳುನಾಡು ಉಸ್ತುವಾರಿಯಾಗಿ ಸಚಿವ ಪೀಯೂಷ್ ಗೋಯಲ್ ನೇಮಕ

 ಚೆನ್ನೈ: ಪಕ್ಷದ ಮುಂದಿನ ಗುರಿ ತಮಿಳುನಾಡು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡಿದ ಮರುದಿನವೇ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಅವರನ್ನು ತಮಿಳುನಾಡಿನ ಬಿಜೆಪಿ ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. 


ಎಐಎಡಿಎಂಕೆ ಬಂಡಾಯ ನಾಯಕರಾದ ಒ.ಪನ್ನೀರಸೆಲ್ವಂ ಹಾಗೂ ಟಿಟಿವಿ ದಿನಕರನ್‌ ಅವರನ್ನು ಎನ್‌ಡಿಎ ಮೈತ್ರಿಕೂಟದ ಒಳಗಡೆ ಸೇರಿಸಲು ಬಿಜೆಪಿ ತನ್ನ ಕಾರ್ಯತಂತ್ರವನ್ನು ಬಿರುಸುಗೊಳಿಸಿದೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನೈನಾರ್‌ ನಾಗೇಂದ್ರನ್‌ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಇತ್ತೀಚಿಗೆ ವಿಸ್ತೃತ ಸಭೆ ನಡೆಸಿದ್ದರು. ಇದಾದ ಬಳಿಕ ಪೀಯೂಷ್‌ ಗೋಯಲ್ ಅವರನ್ನು ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದೆ.

ರಾಜ್ಯ ಸಚಿವರಾದ ಅರ್ಜುನ್‌ ಮೇಘವಾಲ್‌ ಮುರಳೀಧರ್‌ ಮಾಹೊಲ್‌ ಅವರನ್ನು ಸಹ ಉಸ್ತುವಾರಿಗಳಾಗಿ ನೇಮಿಸಲಾಗಿದೆ.

2019ರಲ್ಲಿಯೂ ಎಐಎಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವಲ್ಲಿ ಪೀಯೂಷ್‌ ಅವರು ಪ್ರಮುಖ ಪಾತ್ರ ವಹಿಸಿದ್ದು ಪಳನಿಸ್ವಾಮಿ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಮಿತ್ರಪಕ್ಷಗಳ ನಡುವೆ ಸೀಟು ಹಂಚಿಕೆ ವಿಚಾರ ಬಂದಾಗ ಕಠಿಣ ಸಂಧಾನಕಾರರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.








ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries