ನವದೆಹಲಿ (PTI): 'ಚುನಾವಣಾ ಪ್ರಕ್ರಿಯೆಯಲ್ಲಿನ ಸುಧಾರಣೆಗೆ ಸಂಬಂಧಿಸಿದಂತೆ ಸೂಕ್ತ ಸಲಹೆಗಳನ್ನು ಆಯೋಗಕ್ಕೆ ಸಲ್ಲಿಸಲು ದಾಖಲೆಗಳನ್ನು ಸಿದ್ಧಪಡಿಸಲಾಗುತ್ತಿದೆ' ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಶುಕ್ರವಾರ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷವು 2014ರಿಂದಲೂ ಚುನಾವಣಾ ಸುಧಾರಣೆಗಳಿಗಾಗಿ, ಚುನಾವಣಾ ಕಾವಲು ಪಡೆಗೆ ಒಂದೇ ಒಂದು ಸಲಹೆಯನ್ನು ನೀಡಿಲ್ಲ ಎಂಬ ಬಿಜೆಪಿ ಆರೋಪವನ್ನು ತಿರಸ್ಕರಿಸಿದ್ದಾರೆ.
'ರಾಜ್ಯಸಭಾ ನಾಯಕ, ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಹಾಕಿರುವ ಸವಾಲನ್ನು ಸ್ವೀಕರಿಸಿದ್ದೇವೆ. ಶೀಘ್ರದಲ್ಲೇ ಈ ಆರೋಪ ಸುಳ್ಳು ಎಂಬುದನ್ನು ಸಾಬೀತುಪಡಿಸುವ ದಾಖಲೆಯನ್ನು ಬಿಡುಗಡೆಗೊಳಿಸುತ್ತೇವೆ' ಎಂದಿದ್ದಾರೆ.

