ಕುಂಬಳೆ: ಪುತ್ತಿಗೆ ಪಂಚಾಯತಿ ಬಿಜೆಪಿ ಸಮಿತಿಯ ಚುನಾವಣಾ ಅವಲೋಕನ ಸಭೆ ಎಡನಾಡು ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.
ಬಿಜೆಪಿ ಕೇರಳ ಉತ್ತರ ವಲಯ ಉಪಾಧ್ಯಕ್ಷ ವಿಜಯ್ ಕುಮಾರ್ ರೈ ಸಭೆ ಉದ್ಘಾಟಿಸಿ ಮಾತನಾಡಿದರು. ಪುತ್ತಿಗೆ ಪಂಚಾಯತಿ ಬಿಜೆಪಿ ಅಧ್ಯಕ್ಷ ಪುರುಷೋತ್ತಮ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯ ಕೋಳಾರು ಸತೀಶ್ಚಂದ್ರ ಭಂಡಾರಿ, ರಾಜ್ಯ ಕೌನ್ಸಿಲ್ ಸದಸ್ಯ ಜಯಂತ ಪಾಟಾಳಿ, ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಮಂಡಲ ಉಪಾಧ್ಯಕ್ಷ ಪದ್ಮನಾಭ ಬಿ.ಎನ್. ಮತ್ತು ಪಂಚಾಯತಿ ವ್ಯಾಪ್ತಿಯ ಕಾರ್ಯಕರ್ತರು, ನೇತಾರರು ಸಲಹೆ ಸೂಚನೆಗಳನ್ನು ನೀಡಿದರು. ಚುನಾವಣೆಯಲ್ಲಿ ವಿಜಯ ಗಳಿಸಿದ ಲಕ್ಷ್ಮಿ ವಿ.ಭಟ್, ಪುಷ್ಪಲತಾ ಹಾಗೂ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳನ್ನೂ ಗೌರವಿಸಿ ಅಭಿನಂದಿಸಲಾಯಿತು. ಎಸ್.ಐ.ಆರ್ ಮತ್ತು ವಿಧಾನಸಭಾ ಚುನಾವಣೆಗೆ ತಯಾರಿಯ ಬಗ್ಗೆ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಪಂಚಾಯತಿ ಪ್ರಧಾನ ಕಾರ್ಯದರ್ಶಿ ಜನಾರ್ದನ ಕಣ್ಣೂರು ಸ್ವಾಗತಿಸಿ, ವಿಶ್ವನಾಥ ಜಿ. ವಂದಿಸಿದರು.

.jpg)
