HEALTH TIPS

ಚಳಿಯಲ್ಲಿ ಮೈಬೆಚ್ಚಗಿಡಲು ಹಚ್ಚಿದ್ದ ಬೆಂಕಿ ಮನೆಮಂದಿಯನ್ನೇ ಕೊಂದಿತು!

 ಸರನ್: ಬಿಹಾರದ ಸರನ್ ಜಿಲ್ಲೆಯಲ್ಲಿ ಚಳಿ ಹಿನ್ನೆಲೆ ಮೈಬೆಚ್ಚಗಿಡಲು ಹಚ್ಚಲಾಗಿದ್ದ ಬೆಂಕಿ ಕುಟುಂಬ ಸದಸ್ಯರ ಪ್ರಾಣ ತೆಗೆದಿದೆ. ಶಾಖಕ್ಕಾಗಿ ಮನೆಯ ಕೊಠಡಿಯೊಂದರ ಮೂಲೆಯೊಂದರಲ್ಲಿ ಬೆಂಕಿ ಹಾಕಿ ಬಾಗಿಲು ಮುಚ್ಚಿ ಮಲಗಿದ್ದರು. ಈ ಸಂದರ್ಭ ಕೊಠಡಿ ತುಂಬಾ ಹೊಗೆ ಆವರಿಸಿ ಮೂವರು ಮಕ್ಕಳು ಸೇರಿದಂತೆ ಕುಟುಂಬದ ನಾಲ್ವರು ಸದಸ್ಯರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. 


ಭಗವಾನ್ ಬಜಾರ್ ಪ್ರದೇಶದ ಮನೆಯಲ್ಲಿ ಈ ಘಟನೆ ನಡೆದಿದ್ದು, ಕುಟುಂಬದ ಇನ್ನಿಬ್ಬರು ಸದಸ್ಯರು ಪ್ರಜ್ಞೆ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೃತರು ಉತ್ತರ ಪ್ರದೇಶದ ಸರ್ಕಾರಿ ಅಧಿಕಾರಿಯೊಬ್ಬರ ಕುಟುಂಬ ಸದಸ್ಯರಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

'ಮನೆಯ ಕೊಠಡಿಯ ಬಾಗಿಲು ಮುಚ್ಚಿದ್ದರಿಂದ ಆಮ್ಲಜನಕದ ಕೊರತೆಯುಂಟಾಗಿ ಅವರು ಮೃತಪಟ್ಟಿದ್ದಾರೆ. ಮೂವರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಪ್ರಜ್ಞೆ ಕಳೆದುಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತನಿಖೆ ಆರಂಭವಾಗಿದೆ'ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಆಶಿಶ್ ತಿಳಿಸಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ತನಿಖೆಯಲ್ಲಿ ಸಹಕರಿಸುತ್ತಿದೆ. ಎಲ್ಲ ಕೋನಗಳಿಂದ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.







ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries