ಈ ಆದೇಶ ನ್ಯಾಯಾಂಗ ಶಾಸನಕ್ಕೆ ಸಮವಾಗಿದೆ ಎಂದು ಜಾರಿ ನಿರ್ದೇಶನಾಲಯ ವಾದಿಸಿದ್ದು, ಈ ಅರ್ಜಿಯ ವಿಚಾರಣೆ ಮುಂದಿನ ವಾರ ವಿಚಾರಣೆಗೆ ಪಟ್ಟಿ ಮಾಡಲಾಗಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿರುವ ದೂರು ಎಫ್ಐಆರ್ ಆಧಾರದಲ್ಲಿ ದಾಖಲಾಗದೆ ಇರುವುದರಿಂದ ಡಿಸೆಂಬರ್ 16ರ ವಿಚಾರಣೆಯ ವೇಳೆ ವಿಚಾರಣಾ ನ್ಯಾಯಾಲಯದ ನ್ಯಾ. ವಿಶಾಲ್ ಗೊಗ್ನೆ ಅವರು ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ಪರಿಗಣಿಸಲು ನಿರಾಕರಿಸಿದ್ದರು.
ಈ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದಿಲ್ಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.

