ಮುಳ್ಳೇರಿಯ: ಫೆ. 22 ರಿಂದ 27ರ ತನಕ ನಡೆಯುವ ಮಿಂಚಿಪದವು ಶ್ರೀ ಕಾವೇರಮ್ಮ ಮಹಾಲಿಂಗೇಶ್ವರ ಕ್ಷೇತ್ರದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ನಡೆಯಿತು. ಆಮಂತ್ರಣ ಪತ್ರಿಕೆಯನ್ನು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದರು ಬಿಡುಗಡೆಗೊಳಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಧುಸೂದನನ ಆಯರ್ ಅಧ್ಯಕ್ಷತೆ ವಹಿಸಿದ್ದರು. ವಿಷ್ಣು ಪ್ರಸಾದ ತಂತ್ರಿ ಕುಂಟಾರು ಉಪಸ್ಥಿತರಿದ್ದರು. ವಾಸುದೇವ ಪುಣಿಚಿತ್ತಾಯ, ಬ್ರಹ್ಮಕಲಶ ಕಾರ್ಯಾಧ್ಯಕ್ಷ ನ್ಯಾಯವಾದಿ ದಾಮೋದರ ಎಂ, ಸೇವಾ ಸಮಿತಿ ಅಧ್ಯಕ್ಷ ಸದಾನಂದ ಅಡ್ಕ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ಅಧ್ಯಕ್ಷ ಅಖಿಲೇಶ್ ನಗುಮುಗಂ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷೆ ಗೀತಾ ದಾಮೋದರನ್, ಸೇವಾ ಸಮಿತಿ ಕಾರ್ಯಾಧ್ಯಕ್ಷ ರಾಮಚಂದ್ರ ಎನ್. ಮಿಂಚಿಪದವು, ಸೇವಾ ಸಮಿತಿ ಪದಾಧಿಕಾರಿಗಳು ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು. ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಶಿವರಾಮ ಎಂ.ಎನ್. ಸ್ವಾಗತಿಸಿ, ಜಯಕರ ಎಂ. ವಂದಿಸಿದರು.




.jpg)
