HEALTH TIPS

ವಿದ್ಯುತ್‌ ತಿದ್ದುಪಡಿ ಮಸೂದೆ: ಸಂಸತ್ ಸದಸ್ಯರ ಸಮಿತಿಯೊಂದಿಗೆ ಚರ್ಚೆ

ನವದೆಹಲಿ: ವಿದ್ಯುತ್‌ (ತಿದ್ದುಪಡಿ) ಮಸೂದೆಯ ಕರಡಿನ ಪ್ರಸ್ತಾವ 2025ಕ್ಕೆ ಸಂಬಂಧಿಸಿದಂತೆ ಕೇಂದ್ರ ವಿದ್ಯುತ್ ಸಚಿವ ಮನೋಹರ್ ಲಾಲ್ ಅವರು ಸಂಸತ್ ಸದಸ್ಯರ ಸಮಿತಿಯೊಂದಿಗೆ ಸಭೆ ನಡೆಸಿದ್ದಾರೆ ಎಂದು ವಿದ್ಯುತ್ ಸಚಿವಾಲಯ ಶನಿವಾರ ತಿಳಿಸಿದೆ.

ವಿವಿಧ ಪಕ್ಷಗಳಿಗೆ ಸೇರಿದ ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಿದ್ದುಪಡಿ ಮಸೂದೆಯಲ್ಲಿರುವ ವಿವಿಧ ಪ್ರಸ್ತಾವಗಳ ಕುರಿತು ಸದಸ್ಯರೊಂದಿಗೆ ಸಮಾಲೋಚಿಸಲು ಸಚಿವರು ಈ ಸಭೆಯನ್ನು ಕರೆದಿದ್ದರು.

ಈ ತಿದ್ದುಪಡಿ ಮಸೂದೆಯು ದೇಶದ ವಿದ್ಯುತ್ ವಲಯವನ್ನು ಸದೃಢಗೊಳಿಸುವ ಉದ್ದೇಶ ಹೊಂದಿದೆ ಎಂದು ಸಚಿವರು ಹೇಳಿದ್ದಾರೆ.

ರಾಜ್ಯ ಸರ್ಕಾರಗಳು ಗೃಹ, ಕೃಷಿ ಗ್ರಾಹಕರಂತಹ ಗುಂಪುಗಳಿಗೆ ಸಬ್ಸಿಡಿಗಳನ್ನು ನೀಡುವುದನ್ನು ಮುಂದುವರಿಸಬಹುದು. ಈ ಗ್ರಾಹಕರಿಗೆ ವೆಚ್ಚದಲ್ಲಿ ಯಾವುದೇ ಹೆಚ್ಚಳವಾಗದಿರಬಹುದು. ಮಸೂದೆಯು ದೇಶದ ಉದ್ಯಮದ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಸಹ ಪ್ರಯತ್ನಿಸುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದೆ.

ಪ್ರಸ್ತಾವಿತ ಈ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಅಖಿಲ ಭಾರತ ವಿದ್ಯುತ್ ಎಂಜಿನಿಯರ್‌ಗಳ ಒಕ್ಕೂಟವು (ಎಐಪಿಇಎಫ್‌) ಡಿಸೆಂಬರ್‌ 23ರಂದು ದೇಶ ವ್ಯಾಪಿ ಪ್ರತಿಭಟನೆಗೆ ಕರೆ ನೀಡಿದೆ. ಕಾರ್ಮಿಕ ಒಕ್ಕೂಟಗಳು ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಪ್ರತಿಭಟನೆಗೆ ಬೆಂಬಲ ನೀಡುವುದಾಗಿ ಹೇಳಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries