ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಜನರಲ್ ಆಸ್ಪತ್ರೆ ಕಾಸರಗೋಡು ಇದರ ವತಿಯಿಂದ ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯಲ್ಲಿ ರಕ್ತದಾನ ಶಿಬಿರ ನಡೆಯಿತು.
ಶಾಲಾ ಸಂಚಾಲಕ ಡಾ. ಜಯಪ್ರಕಾಶ ನಾರಾಯಣ ಶಿಬಿರ ಉದ್ಘಾಟಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸಂಚಾಲಕ ರಾಜೇಂದ್ರನ್. ಕೆ. ಪಿ, ಹಿರಿಯ ಅಧ್ಯಾಪಕ ರವಿಲೋಚನ. ಸಿ. ಎಚ್, ಆರೋಗ್ಯ ಇಲಾಖೆಯ ವಿವಿಧ ಪ್ರತಿನಿಧಿಗಳು, ಅಧ್ಯಾಪಕರು ಉಪಸ್ಥಿತರಿದ್ದರು. ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಅನೇಕ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಸಹಕರಿಸಿದರು.




.jpg)
