ಪಟ್ನಾ: ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ನಿತಿನ್ ನಬೀನ್ ಅವರು ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದ ಸಂಪುಟದಲ್ಲಿನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಸ್ತೆ ನಿರ್ಮಾಣ, ನಗರಾಭಿವೃದ್ಧಿ ಮತ್ತು ವಸತಿ ಖಾತೆಗಳನ್ನು ಹೊಂದಿದ್ದ ನಬೀನ್ ಅವರನ್ನು ಡಿಸೆಂಬರ್ 14ರಂದು ಪಕ್ಷದ ಉನ್ನತ ಹುದ್ದೆಗೆ ನೇಮಿಸಲಾಗಿತ್ತು.
ಅವರು ಡಿಸೆಂಬರ್ 16ರಿಂದ ಜಾರಿಗೆ ಬರುವಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಂಪುಟ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ನಗರಾಭಿವೃದ್ಧಿ ಮತ್ತು ವಸತಿ ಖಾತೆಯನ್ನು ಉಪ ಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರಿಗೆ ನೀಡಲಾಗಿದ್ದು, ರಸ್ತೆ ನಿರ್ಮಾಣ ಇಲಾಖೆಯ ಹೊಣೆಯನ್ನು ದಿಲೀಪ್ ಜೈಸ್ವಾಲ್ ಅವರ ವಹಿಸಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

