ನವದೆಹಲಿ: ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಮಂಗಳವಾರ) ಆರ್ಥಿಕ ತಜ್ಞರು ಮತ್ತು ವಲಯ ತಜ್ಞರನ್ನು ಭೇಟಿ ಮಾಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಫೆ. 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸುವ ಸಾಧ್ಯತೆಯಿದೆ.

