HEALTH TIPS

Delhi Airport | ದಟ್ಟ ಮಂಜು-ಕಡಿಮೆ ಗೋಚರತೆ: 118 ವಿಮಾನಗಳ ಹಾರಾಟ ರದ್ದು

 ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ದಟ್ಟ ಮಂಜು ಕವಿದ ವಾತವರಣವಿದ್ದ ಪರಿಣಾಮ ವಿಮಾನಗಳ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ. ಕನಿಷ್ಠ 118 ವಿಮಾನಗಳನ್ನು ರದ್ದುಗೊಳಿಸಲಾಗಿದ್ದು, 16 ವಿಮಾನಗಳ ಮಾರ್ಗ ಬದಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿದಿನ 1,300 ವಿಮಾನಗಳು ಕಾರ್ಯಾಚರಣೆ ನಡೆಸುತ್ತವೆ. ದಟ್ಟ ಮಂಜು ಮತ್ತು ಕಡಿಮೆ ಗೋಚರತೆ ಕಾರಣ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವಿಮಾನಗಳ ಹಾರಾಟದ ಮಾಹಿತಿ ನೀಡುವ 'ಫ್ಲೈಟ್‌ರಾಡಾರ್‌-24' ವೆಬ್‌ಸೈಟ್ ವರದಿ ಮಾಡಿದೆ.

ಮಂಜು ಮತ್ತು ಕಡಿಮೆ ಗೋಚರತೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಸೌಲಭ್ಯ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಿಮಾನಯಾನ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯವು ತಿಳಿಸಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries