ಧರ್ಮಪುರಿ: ತಮಿಳುನಾಡಿನ ಧರ್ಮಪುರಿಯಲ್ಲಿ ಟಿವಿಕೆ ಪಕ್ಷದ ಕಾರ್ಯಕರ್ತರ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬರು ಕರ್ತವ್ಯನಿರತ ಪೊಲೀಸ್ ಅಧಿಕಾರಿಗೆ ಕಚ್ಚಿರುವ ಘಟನೆ ನಡೆದಿದೆ. ಈ ದೃಶ್ಯದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರ ಗಮನ ಸೆಳೆಯುತ್ತಿದೆ.
ಹೊಸದಾಗಿ ಆರಂಭವಾದ ಮದ್ಯದ ಅಂಗಡಿಯನ್ನು ಮುಚ್ಚುವಂತೆ ಆಗ್ರಹಿಸಿ ಟಿವಿಕೆ ಪಕ್ಷದ ಕಾರ್ಯಕರ್ತರು ಧರ್ಮಪುರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಅವರನ್ನು ತಡೆಯಲು ಮುಂದಾದ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ತೊಡಗಿದ್ದಾಗ, ಜೆಮಿನಿ ಎಂದು ಗುರುತಿಸಲ್ಪಟ್ಟ ವ್ಯಕ್ತಿ ಪೊಲೀಸ್ ಅಧಿಕಾರಿಯ ಕೈಗೆ ಕಚ್ಚಿದ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಳಿಕ ಜೆಮಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕರ್ತವ್ಯನಿರತ ಪೊಲೀಸರಿಗೆ ಅಡ್ಡಿಪಡಿಸಿದ ಆರೋಪದಡಿ ಮತ್ತೂ ಮೂವರು ಪ್ರತಿಭಟನಾನಿರತರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.




